ತೀರ್ಥಹಳ್ಳಿ: ಗರ್ಭ ಧರಿಸಿದ ದನದ ಎರಡೂ ಕಾಲು ಕಡಿದು ಕಸಾಯಿಖಾನೆಗೆ ಸಾಗಾಟ ಮಾಡಲು ಯತ್ನಿಸಿದ್ದ ಆರೋಪಿಯನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಉಳಿದ ಮೂರು ಮಂದಿ ಆರೋಪಿಗಳ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ.
ತೀರ್ಥಹಳ್ಳಿ ತಾಲೂಕಿನ ಬಾಳೇಬೈಲು ಸರ್ಕಾರಿ ಹಿ.ಪ್ರಾ.ಶಾಲೆ ಸಮೀಪ ಶುಕ್ರವಾರ ರಾತ್ರಿ ಗರ್ಭ ಧರಿಸಿದ ದನವೊಂದರ ಹಿಂದಿನ ಎರಡು ಕಾಲುಗಳನ್ನು ಬರ್ಬರವಾಗಿ ಕಡಿದು ಕಸಾಯಿ ಖಾನೆಗೆ ಸಾಗಿಸುವ ಪ್ರಯತ್ನದಲ್ಲಿದ್ದಾಗ ಮನೆಯವರು ಎಚ್ಚರಗೊಂಡು ನೋಡಿದ್ದರಿಂದ ದನವನ್ನು ಅಲ್ಲಿಯೇ ಬಿಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದರು.
ಆರೋಪಿಗಳ ಪತ್ತೆ ಕಾರ್ಯಚರಣೆ ನಡೆಸಿದ ತೀರ್ಥಹಳ್ಳಿ ಡಿವೈಎಸ್ಪಿ ಡಾ.ಸಂತೋಷ್ ಹಾಗೂ ಸರ್ಕಲ್ ಇನ್ಸ್ಪೆಕ್ಟರ್ ಗಣೇಶಪ್ಪ ಅವರ ಮಾರ್ಗದರ್ಶನದಲ್ಲಿ ಪೋಲಿಸ್ ಸಬ್ ಇನ್ಸ್ಪೆಕ್ಟರ್ ಯಲ್ಲಪ್ಪ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಾಳೇಬೈಲು ಸಿದ್ದೇಶ್ವರ ಬಡಾವಣೆಯ ಸಲೀಂ (36) ಆಲಿಯಾಸ್ ಜಲೀಲ್ ಸಾಹೇಬ್ ನನ್ನು ಆತ ದುಷ್ಕ್ರತ್ಯಕ್ಕೆ ಬಳಸಿದ್ದ ಮಾರುತಿ ರಿಟ್ಜ್ ಕಾರು ಸಹಿತ ಬಂಧಿಸಿ ದನಗಳ ಕಳ್ಳ ಸಾಗಾಣಿಕೆಯ ಕೇಸುಗಳನ್ನು ದಾಖಲಿಸಿದ್ದಾರೆ.
ಶಿವಮೊಗ್ಗ ನ್ಯಾಯಾಂಗ ಬಂಧನಕ್ಕೆ ಶನಿವಾರ ರಾತ್ರಿ ಒಪ್ಪಿಸಲಾಗಿದೆ. ಉಳಿದ ಮೂರು ಮಂದಿ ಆರೋಪಿಗಳ ಪತ್ತೆಗಾಗಿ ವ್ಯಾಪಕ ಬಲೆ ಬೀಸಿದ್ದು, ಶೀಘ್ರ ಬಂಧಿಸುವುದಾಗಿ ಸಬ್ ಇನ್ಸ್ಪೆಕ್ಟರ್ ಯಲ್ಲಪ್ಪ ತಿಳಿಸಿದ್ದಾರೆ.
ಪೊಲೀಸರ ಕಾರ್ಯವನ್ನು ಜನರು ಶ್ಲಾಘಿಸಿದ್ದಾರೆ. ಗೋವಿನ ಕಾಲನ್ನು ಕಡಿದು ಕಳ್ಳ ಸಾಗಣಿಕೆಗೆ ವಿಫಲ ಯತ್ನ ನಡೆಸಿದ ದುಷ್ಕರ್ಮಿಗಳನ್ನು ಅತೀ ಶೀಘ್ರದಲ್ಲಿ ಬಂಧಿಸಿ ಕಠಿಣ ಶಿಕ್ಷೆ ನೀಡುವಂತೆ ತೀರ್ಥಹಳ್ಳಿ ತಾಲೂಕು ಶ್ರೀರಾಮಸೇನೆ ಶಾಸಕ ಆರಗ ಜ್ಞಾನೇಂದ್ರ ಮತ್ತು ಗ್ರಾಮಸ್ಥರು ಪೊಲೀಸರಿಗೆ ಮನವಿ ನೀಡಿದ್ದರು.
Click this button or press Ctrl+G to toggle between Kannada and English