ಮಂಗಳೂರು : ಜಿಲ್ಲೆಯಲ್ಲಿ ಮತ್ತೆ ಕೊರೊನಾ ಆತಂಕ ಹೆಚ್ಚಾಗಿದೆ. ಕಳೆದ 12 ದಿನಗಳಲ್ಲಿ ದ.ಕ. ಜಿಲ್ಲೆಯಲ್ಲಿ ಯಾವುದೇ ಕೊರೊನಾ ಸೋಂಕು ಪತ್ತೆಯಾಗಿರಲಿಲ್ಲ. ಅದರ ಬಳಿಕ ಏಪ್ರಿಲ್ 17ರಂದು ಉಪ್ಪಿನಂಗಡಿ ಮೂಲದ ವ್ಯಕ್ತಿಯಲ್ಲಿ ಪಾಸಿಟಿವ್ ಪತ್ತೆಯಾಗಿತ್ತು. ಬಳಿಕ ವೆನ್ಲಾಕ್ ಆಸ್ಪತ್ರೆಯಲ್ಲಿ ಅವರಿಗೆ ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದ ವ್ಯಕ್ತಿಯ ಪತ್ನಿಯಲ್ಲಿ ಏಪ್ರಿಲ್ 19ರಂದು ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ದ.ಕ. ಜಿಲ್ಲೆಯಲ್ಲಿ ಈಗ ಕೊರೊನಾ ಪೀಡಿತರ ಸಂಖ್ಯೆ 15 ಕ್ಕೆ ಏರಿದೆ. 12 ಮಂದಿ ಡಿಸ್ಚಾರ್ಜ್ ಆಗಿದ್ದಾರೆ
Click this button or press Ctrl+G to toggle between Kannada and English