ಮಂಗಳೂರು : ದ.ಕ.ಜಿಲ್ಲೆ ಕೊರೋನ ಹಾಟ್‌ಸ್ಪಾಟ್ ಆಗಿರುವುದರಿಂದ ಯಾವ ರೀತಿ ಮುಂದಿನ ಹೆಜ್ಜೆ ಇರಿಸಬೇಕು ಎಂಬ ಬಗ್ಗೆ ಇಲ್ಲಿಯ ತನಕ ನಿರ್ಧಾರ ಕೈಗೊಳ್ಳಲಾಗಿಲ್ಲ. ರಾಜ್ಯದಲ್ಲಿ ಲಾಕ್‌ಡೌನ್ ಸಡಿಲಿಕೆ ಮಾಡಿ ರಾಜ್ಯ ಸರಕಾರ ಹೊಸ ನಿರ್ದೇಶನಗಳನ್ನು ನೀಡಿದೆ.
ಎಪ್ರಿಲ್ 23ರಂದು ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ ಹದಿನಾರು ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಹಲವು ಕಂಟೈನ್ಮೆಂಟ್ ವಾರ್ಡ್ ಗಳನ್ನು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಲಾಕ್‌ಡೌನ್ ಸಡಿಲಿಕೆ ಸಂದರ್ಭ ಎಚ್ಚರ ವಹಿಸಬೇಕಾಗಿದೆ.
ಮೀನುಗಾರಿಕೆ ವಲಯದಲ್ಲಿ ಸುರಕ್ಷಿತ ಅಂತರ ಕಾಪಾಡುವುದು ಕಷ್ಟ. ಬಂದರಿನಲ್ಲಿ ಮೀನುಗಾರಿಕೆ ಚಟುವಟಿಕೆಯಲ್ಲಿ ಸುಮಾರು 2 ಸಾವಿರಕ್ಕಿಂತಲೂ ಅಧಿಕ ಮಂದಿ ಏಕಕಾಲದಲ್ಲಿ ಗುಂಪುಗೂಡುವುದರಿಂದ ಕೊರೋನ ಸೋಂಕು ಹರಡುವುದನ್ನು ತಡೆಗಟ್ಟಲು ಅಸಾಧ್ಯ ಎಂದಿದ್ದಾರೆ. ಇನ್ನು ಈ ಬಗ್ಗೆ ಯಾವ ರೀತಿ ಕ್ರಮ ಕೈಗೊಳ್ಳಬಹುದು ಯಾವೆಲ್ಲ ಎಚ್ಚರಿಕಾ ಕ್ರಮ ಕೈಗೊಳ್ಳಬಹುದೆಂದು ಮೀನುಗಾರ ಮುಖಂಡರ ಜತೆಗೂ ಚರ್ಚೆ ನಡೆಸಬೇಕಾಗಿದೆ ಎಂದರು.
ಜಿಲ್ಲಾಡಳಿತ ಸಡಿಲಿಕೆ ನಿಯಮ ಆದೇಶ ಹೊರಡಿಸದ ಹೊರತು ಯಾರು ಕೂಡ ಲಾಕ್‌ಡೌನ್ ಉಲ್ಲಂಘನೆ ಮಾಡುವಂತಿಲ್ಲ ಎಂದು ಸಚಿವರು ತಿಳಿಸಿದ್ದಾರೆ.
Click this button or press Ctrl+G to toggle between Kannada and English