ಬಂಟ್ವಾಳ: ಇತ್ತೀಚೆಗೆ ಬಂಟ್ವಾಳ ದಲ್ಲಿ ಕೋವಿಡ್-19 ಸೋಂಕಿನ ಕಾರಣ ಮೃತರಾದ ಮಹಿಳೆ (ಸೋಂಕಿತ ಸಂಖ್ಯೆ 390)ರ ಸಂಪರ್ಕದಿಂದ ಮತ್ತೋರ್ವ ಮಹಿಳೆಗೆ ಸೋಂಕು ತಾಗಿರುವುದು ದೃಢವಾಗಿದೆ.
78 ವರ್ಷದ ಮಹಿಳೆ ಇತ್ತೀಚೆಗೆ ಪಾರ್ಶ್ವವಾಯು ಗೆ ಸಂಬಧಿಸಿದಂತೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ಮೃತಪಟ್ಟ ಮಹಿಳೆಗೆ ಹತ್ತಿರದ ಸಂಬಂಧಿಯಾಗಿರುವ ಈಕೆಯನ್ನು ಬುಧವಾರ ಖಾಸಗಿ ಆಸ್ಪತ್ರೆಯಿಂದ ಜಿಲ್ಲೆಯ ಕೋವಿಡ್ ಆಸ್ಪತ್ರೆ ವೆನ್ಲಾಕ್ ಗೆ ದಾಖಲಿಸಲಾಗಿತ್ತು.
ಇವರ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಇದರಿಂದ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು ಹೊಸ 16 ಸೋಂಕು ಪ್ರಕರಣಗಳು ದೃಢವಾಗಿದ್ದು, ಒಟ್ಟು 443 ಸೋಂಕು ಪ್ರಕರಣಗಳಿವೆ. ಅದರಲ್ಲಿ 17 ಜನರು ಮೃತರಾಗಿದ್ದಾರೆ. 141 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಮರಳಿದ್ದಾರೆ.
Click this button or press Ctrl+G to toggle between Kannada and English