ಬೆಳ್ತಂಗಡಿ: ಬಂಟ್ವಾಳದ ಕಸಬಾ ದಲ್ಲಿ ಕೋವಿಡ್ನಿಂದ ಮೃತಪಟ್ಟ ಮಹಿಳೆಯ ಅಂತ್ಯ ಸಂಸ್ಕಾರಕ್ಕೆ ಅವಕಾಶ ನೀಡದೆ ತಡರಾತ್ರಿಯವರೆಗೆ ಜಿಲ್ಲಾಡಳಿತವನ್ನು ತಡೆದ ಶಾಸಕರನ್ನೂ ಕೂಡಲೇ ಬಂಧಿಸಬೇಕೆಂದು ಎಂದು ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ ಒತ್ತಾಯಿಸಿದ್ದಾರೆ.
ಮೃತದೇಹವನ್ನು ಗೌರವಯುತವಾಗಿ ಅಂತ್ಯಕ್ರಿಯೆ ನಡೆಸಬೇಕು. ಅಲ್ಲಿ ಯಾವುದೇ ರೀತಿಯಲ್ಲಿ ಸೋಂಕು ಹರಡುವ ಸಾಧ್ಯತೆಗಳಿಲ್ಲ. ಆದರೂ ಉದ್ದೇಶಪೂರ್ವಕವಾಗಿ ಬೇಜವಾಬ್ದಾರಿಯಿಂದ ಶಾಸಕರೇ ಮುಂದೆ ನಿಂತು ಅಂತ್ಯಕ್ರಿಯೆ ಮಾಡುವುದನ್ನುಮಂಗಳೂರು ಉತ್ತರ ಶಾಸಕರು ತಡೆದಿದ್ದಾರೆ. ಇದು ಬಹಳ ಬೇಸರದ ವಿಚಾರವಾಗಿದೆ. ಇದು ಕೊರೊನಾ ವಿರುದ್ಧದ ಹೋರಾಟಕ್ಕೆ ದೊಡ್ಡ ಹಿನ್ನಡೆಯಾಗಿದೆ. ಇದೇ ರೀತಿಯಲ್ಲಿ ಮುಂದುವರೆದರೆ ನಾವು ಕೊರೊನಾ ವಿರುದ್ಧ ಹೋರಾಡುವುದು ಹೇಗೆ ಎಂದು ಪ್ರಶ್ನಿಸಿದರು.
Click this button or press Ctrl+G to toggle between Kannada and English