ಬೈಕಂಪಾಡಿ ಎಪಿಎಂಸಿ ವರ್ತಕರು ಶೀಘ್ರದಲ್ಲೇ ವಾಪಾಸ್ ; ನಾಲ್ಕು ತಿಂಗಳಲ್ಲಿ ಟೌನ್ ಹಾಲ್ ಬಳಿ ತಾತ್ಕಾಲಿಕ ಮಾರುಕಟ್ಟೆ ನಿರ್ಮಾಣ

9:50 PM, Tuesday, April 28th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

MCC marketಮಂಗಳೂರು: ಬೈಕಂಪಾಡಿಯಲ್ಲಿರುವ ಎಪಿಎಂಸಿ ಆವರಣಕ್ಕೆ ಸ್ಥಳಾಂತರಿಸಿದ ಕೇಂದ್ರ ಮಾರುಕಟ್ಟೆಯ ಮಾರಾಟಗಾರರಿಗೆ ಸ್ಥಳಾವಕಾಶ ಕಲ್ಪಿಸಲು 5.25 ಕೋಟಿ ರೂ.ಗಳ ವೆಚ್ಚದಲ್ಲಿ ಟೌನ್ ಹಾಲ್ ಬಳಿ ತಾತ್ಕಾಲಿಕ ಮಾರುಕಟ್ಟೆ ನಿರ್ಮಿಸಲಾಗುವುದು.

115 ಕೋಟಿ ರೂ.ಗಳ ವೆಚ್ಚದಲ್ಲಿ ಹಳೆಯ ಕಟ್ಟಡವನ್ನು ನೆಲಸಮಗೊಳಿಸಿದ ನಂತರ ಹೊಸ ಕೇಂದ್ರ ಮಾರುಕಟ್ಟೆ ನಿರ್ಮಾಣ ಗೊಳ್ಳಲಿದೆ.

ಮಾರುಕಟ್ಟೆಯ ಪುನರ್ ನಿರ್ಮಾಣವು  ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ (ಎಂಎಸ್ಸಿಎಲ್) ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ನಡೆಯಲಿದೆ. ಇದಕ್ಕಾಗಿ ಎಂಎಸ್‌ಸಿಎಲ್ ಶೀಘ್ರದಲ್ಲೇ ಟೆಂಡರ್ ಕರೆಯಲಿದೆ.

ತಾತ್ಕಾಲಿಕ ಮಾರುಕಟ್ಟೆ ರಚನೆಯು 150 ಕ್ಕೂ ಹೆಚ್ಚು ಅಂಗಡಿಗಳನ್ನು ಮತ್ತು ಸುಮಾರು 200 ಸ್ಟಾಲ್‌ಗಳನ್ನು ಹೊಂದಿರುತ್ತದೆ. ಇದನ್ನು ನಾಲ್ಕು ತಿಂಗಳಲ್ಲಿ ನಿರ್ಮಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English