ಮಂಗಳೂರು ಅಂತರಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನಾಭರಣ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

5:26 PM, Thursday, November 22nd, 2012
Share
1 Star2 Stars3 Stars4 Stars5 Stars
(No Ratings Yet)
Loading...

Gold smugglerಮಂಗಳೂರು : ಸುಮಾರು 35 ಲಕ್ಷ ಮೌಲ್ಯದ ಚಿನ್ನಾಭರಣವನ್ನು ದುಬೈ ನಿಂದ ಮಂಗಳೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ವ್ಯಕ್ತಿಯನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಮಂಗಳೂರು ಕಚೇರಿಯ ಅಧಿಕಾರಿಗಳು ಬುಧವಾರ ಪತ್ತೆಹಚ್ಚಿ ಬಂಧಿಸಿದ್ದಾರೆ.

ಭಟ್ಕಳದ ಅಬ್ದುಲ್‌ ಖಾದಿರ್‌ (25) ಬಂಧಿತ ಆರೋಪಿ ಯಾಗಿದ್ದು ಬುಧವಾರ ಬೆಳಗ್ಗೆ 6.15 ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಈತನನ್ನು ಡಿಆರ್‌ಐ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಕೂಲಂಕುಷವಾಗಿ ತಪಾಸಣೆ ನಡೆಸಿದಾಗ ಚಿನ್ನಾಭರಣ ಪತ್ತೆಯಾಗಿದೆ. ಪತ್ತೆಯಾದ ಸೊತ್ತುಗಳಲ್ಲಿ ಒಂದು ಚಿನ್ನದ ಬಿಸ್ಕಿಟನ್ನು ಎರಡು ತುಂಡುಗಳನ್ನಾಗಿ ಮಾಡಲಾಗಿತ್ತು. ಉಳಿದ ಬಹುಪಾಲು ಚಿನ್ನಾಭರಣಗಳಾಗಿವೆ. ಆರೋಪಿಯು ಚಿನ್ನಾಭರಣಗಳನ್ನು ತಾನು ಧರಿಸಿದ್ದ ಒಳ ಉಡುಪಿನಲ್ಲಿ ಬಚ್ಚಿಟ್ಟುಕೊಂಡು ಬಂದಿದ್ದನು. ಆರೋಪಿ ಅಬ್ದುಲ್‌ ಖಾದಿರ್‌ ಸುಶಿಕ್ಷಿತ ವ್ಯಕ್ತಿಯಾಗಿದ್ದು, ಮಂಗಳೂರಿನ ಫಿಶರೀಸ್‌ ಕಾಲೇಜಿನಲ್ಲಿ ಪದವಿ ಪಡೆದವನಾಗಿರುತ್ತಾನೆ.

ಆರೋಪಿಯನ್ನು ಬುಧವಾರ ಸಂಜೆ ಮಂಗಳೂರಿನ ಸಿ.ಜೆ.ಎಂ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English