ಮುಂಬೈ : ಭಾರತೀಯ ಚಿತ್ರರಂಗದ ಖ್ಯಾತ ನಟ ಇರ್ಫಾನ್ ಖಾನ್ (54) ಕರುಳಿನ ಸೋಂಕು ಕಾಣಿಸಿಕೊಂಡು ಮುಂಬೈ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಏಪ್ರಿಲ್ 29, 2020 ರಂದು ಬುಧವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ಕೊಲೊನ್ ಇನ್‌ಫೆಕ್ಷನ್(ಕರುಳಿನ ಸೋಂಕು)ನಿಂದಾಗಿ ಕೋಕಿಲಬೆನ್ ಆಸ್ಪತ್ರೆಗೆ ದಾಖಲಾಗಿದ್ದ ಇರ್ಫಾನ್ ತುರ್ತು ನಿಗಾ ಘಟಕ (ಐಸಿಯು)ದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಮೂರು ದಿನಗಳ ಹಿಂದಷ್ಟೇ ಜೈಪುರದಲ್ಲಿ ಇರ್ಫಾನ್ ತಾಯಿ ಸಯೀದಾ ಬೇಗಂ (95) ನಿಧನರಾಗಿದ್ದರು. ಲಾಕ್‌ಡೌನ್ ಹಿನ್ನೆಲೆಯಲ್ಲಿ ಅವರು ಅಂತ್ಯಕ್ರಿಯೆಗೆ ಹೋಗಿರಲಿಲ್ಲ. ಈ ವಿಚಾರದಿಂದ ಇರ್ಫಾನ್ ಬಹಳಷ್ಟು ನೊಂದಿದ್ದರು.
ಮುಂಬೈನ ಅಂಧೇರಿಯಲ್ಲಿರುವ ವರ್ಸೋವಾ ಕಬ್ರಾಸ್ತಾನ್‌ನಲ್ಲಿ ಮಧ್ಯಾಹ್ನ 3 ಗಂಟೆಗೆ ಅವರ ಕುಟುಂಬ, ನಿಕಟವರ್ತಿಗಳ ಸಮ್ಮುಖದಲ್ಲಿ ಅಂತ್ಯ ಸಂಸ್ಕಾರ ನೆರವೇರಿದೆ.
ದೇಶಾದ್ಯಂತ ಕೊರೋನಾ ಲಾಕ್ ಡೌನ್ ಇದ್ದ ಕಾರಣ ಕುಟುಂಬ ಸದಸ್ಯರು ಸೇರಿದಂತೆ ಕೇವಲ 20 ಮಂದಿಗೆ ಮಾತ್ರವೇ ತ್ರ ಅಂತಿಮ ವಿಧಿಗಳಿಗೆ ಹಾಜರಾಗಲು ಅವಕಾಶ ನೀಡಲಾಗಿದೆ ಎಂದು ವರದಿಯಾಗಿದೆ. ಅವರ ಸಂಬಂಧಿಕರು ಮತ್ತು ಆಪ್ತರು ಅಂತಿಮ ನಮನ ಸಲ್ಲಿಸಿದರು. ಒಂದರ ನಂತರ ಒಂದರಂತೆ 5-5ರ ಗುಂಪಿನಲ್ಲಿ ಅಂತಿಮ ದರ್ಶನ ಪಡೆಯಲು ಅವರಿಗೆ ಅವಕಾಶ ಕಲ್ಪಿಸಲಾಗಿತ್ತು.
Click this button or press Ctrl+G to toggle between Kannada and English