ಮಂಗಳೂರು: ನಗರದ ಬೋಳೂರು ಪ್ರದೇಶದ ಮಹಿಳೆಯೋರ್ವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬೋಳೂರು ಪ್ರದೇಶದ 58 ವರ್ಷದ ಮಹಿಳೆಗೆ ಕೋವಿಡ್-19 ಸೋಂಕು ಇರುವುದು ಆಕೆಯ ಗಂಟಲು ದ್ರವ ಮಾದರಿ ಪರೀಕ್ಷೆ ವರದಿಯಲ್ಲಿ ಗುರುವಾರ ದೃಢಪಟ್ಟಿದೆ.
ಸೋಂಕಿತ ಸಂಖ್ಯೆ 501ರ ಸಂಪರ್ಕದಿಂದ ಈ ಮಹಿಳೆಗೆ ಸೋಂಕು ತಾಗಿರುವುದು ಖಚಿತವಾಗಿದೆ.
ಬೋಳೂರಿನ ಮಹಿಳಿಗೆ ಸೋಂಕು ತಾಗಿರುವುದು ದೃಢಪಟ್ಟ ಹಿನ್ನಲೆ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗುತ್ತಿದೆ. ಬ್ಯಾರಿಕೇಡ್ ಗಳನ್ನು ತಂದು ಹಾಕಲಾಗುತ್ತಿದೆ.
ರಾಜ್ಯದಲ್ಲಿ ಇದುವರೆಗೆ 557 ಸೋಂಕು ಪ್ರಕರಣಗಳು ದೃಢವಾಗಿದ್ದು, ಅವುಗಳ ಪೈಕಿ 21 ಪ್ರಕರಣಗಳು ಮರಣ ಹೊಂದಿದೆ. ಮತ್ತು 223 ಪ್ರಕರಣಗಳು ಆಸ್ಪತ್ರೆಯಿಂದ ಬಿಡುಗಡೆಯಾಗಿದೆ.
Click this button or press Ctrl+G to toggle between Kannada and English