ಮಂಗಳೂರು : ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮೂರನೇ ಬಲಿಯಾಗಿದೆ. ಬುಧವಾರದಂದು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳದ ಮಹಿಳೆ ಮೃತಪಟ್ಟಿದ್ದಾರೆ.
ಕಳೆದ ಕೆಲವು ದಿನಗಳಿಂದ ಈ ಮಹಿಳೆಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅಲ್ಲದೆ, ನಿನ್ನೆಯಿಂದ ಮಹಿಳೆಯ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ವೆಂಟಿಲೇಟರ್ ಅಳವಡಿಸಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾದ ಅವರು ಮೃತಪಟ್ಟಿದ್ದಾರೆ. ಈ ಬಗ್ಗೆ ದ.ಕ. ಜಿಲ್ಲಾಡಳಿತ ಮಾಹಿತಿ ನೀಡಿದೆ.
ಬಂಟ್ವಾಳ ಕಸಬಾ ನಿವಾಸಿಗಳು ಒಂದೇ ಮನೆಯ ಇಬ್ಬರು ಮಹಿಳೆಯರು ಕೊರೊನಾ ಸೋಂಕಿಗೆ ಬಲಿಯಾಗಿದ್ದರು. ಅವರ ನೆರೆ ಮನೆಯ ಇಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ತಾಯಿ ಮಗಳಲ್ಲಿ ಸೋಂಕು ಪತ್ತೆಯಾಗಿ ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೊದಲು ತಾಯಿಯಲ್ಲಿ ಸೋಂಕು ದೃಢಪಟ್ಟರೆ ಬಳಿಕ ಮಗಳಲ್ಲಿ ಸೋಂಕು ಪತ್ತೆಯಾಗಿತ್ತು.
ಇಂದು ಮೃತಪಟ್ಟ ಮಹಿಳೆಯ ಮಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. ದ.ಕ. ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರು ಬಂಟ್ವಾಳ ಪೇಟೆಯವರೇ ಆಗಿದ್ದಾರೆ. ಈ ಪೈಕಿ ಒಂದೇ ಮನೆಯ ಅತ್ತೆ ಸೊಸೆ ಈಗಾಗಲೇ ಮೃತಪಟ್ಟಿದ್ದು, ಇದೀಗ ನೆರೆ ಮನೆಯ ಮಹಿಳೆ ಮೃತಪಡುವ ಮೂಲಕ ಜನತೆಯಲ್ಲಿ ಆತಂಕ ಎದುರಾಗಿದೆ.
Click this button or press Ctrl+G to toggle between Kannada and English