ಕೋಲಾರ : ಲಾಕ್ ಡೌನ್ ನಿಯಮ ಉಲ್ಲಂಘಿಸಿ ದೇವಸ್ಥಾನ, ಮಸೀದಿ, ಚರ್ಚ್ ಗಳಲ್ಲಿ ಎಲ್ಲೂ ಸಾಮೂಹಿಕ ಪ್ರಾರ್ಥನೆ ಸಲ್ಲಿಸಬಾರದು ಎಂಬ ನಿರ್ಬಂಧ ಇದ್ದರೂ ಮಸೀದಿಯೊಳಗೆ ನಮಾಜ್ ಮಾಡಿ ಕೊರೋನಾ ಹರಡಲು ಮತ್ತಷ್ಟು ಪ್ರೇರಣೆ ನೀಡುತ್ತಿದ್ದ ಕೆಲವರನ್ನು ಕೋಲಾರ ತಹಶೀಲ್ದಾರ್ ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ.
ನಮಾಜ್ ಮಾಡುತ್ತಿರುವ ಮಾಹಿತಿ ಮೇರೆಗೆ ಕೋಲಾರ ನಗರದ ಮುನಿಸಿಪಾಲ್ ಆಸ್ಪತ್ರೆ ಮುಂಭಾಗದ ಮಸೀದಿಗೆ ನುಗ್ಗಿದ ತಹಶೀಲ್ದಾರ್ ಶೋಭಿತಾ ಅವರು, ಲಾಕ್ ಡೌನ್ ಸಮಯದಲ್ಲಿ ನಮಾಜ್ ಮಾಡಲು ನಿಮಗೆ ಯಾರು ಹೇಳಿದ್ದು, ಇವರೆಲ್ಲರನ್ನೂ ಇಲ್ಲಿಯೇ ಕೂಡಿಹಾಕಿ. ಯಾರನ್ನೂ ಹೊರಗೆ ಬಿಡಬೇಡಿ ಎಂದು ಹೇಳಿ ಕಾನೂನು ಉಲ್ಲಂಘನೆ ಮಾಡಿದ ಹನ್ನೊಂದು ಜನರನ್ನು ವಶಕ್ಕೆ ಪಡೆದಿದ್ದಾರೆ.
ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸಿ ನಮಾಜ್ ಮಾಡುತ್ತಿದ್ದ ಹನ್ನೊಂದು ಜನರನ್ನು ವಶಕ್ಕೆ ಪಡೆದಿದ್ದಾರೆ. ಮಸೀದಿಗೆ ನುಗ್ಗಿದ ತಹಶೀಲ್ದಾರ್ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಕೊರೊನಾದಿಂದಾಗಿ ಲಾಕ್ ಡೌನ್ ವಿಧಿಸಲಾಗಿದೆ. ಕೊರೊನಾ ಪ್ರಕರಣಗಳೂ ಹೆಚ್ಚಾಗುತ್ತಿರುವ ಕಾರಣ ಜನರು ಸಾಮೂಹಿಕವಾಗಿ ಎಲ್ಲೂ ಸೇರಬಾರದು, ದೇವಸ್ಥಾನ, ಮಸೀದಿ, ಚರ್ಚ್ ಗಳಲ್ಲಿ ಎಲ್ಲೂ ಸಾಮೂಹಿಕ ಪ್ರಾರ್ಥನೆ ಸಲ್ಲಿಸಬಾರದು ಎಂಬ ನಿರ್ಬಂಧ ಹೇರಲಾಗಿದೆ. ಆದರೆ ಈ ಕಾನೂನು ಉಲ್ಲಂಘಿಸಿ ಮಸೀದಿಯಲ್ಲಿ ನಮಾಜ್ ಮಾಡುತ್ತಿದ್ದವರಿಗೆ ಪಾಠ ಕಲಿಸಲು ತಹಶೀಲ್ದಾರ್ ಶೋಭಿತಾ ಅವರು ಮಸೀದಿ ಪ್ರವೇಶಿಸಿದ್ದಾರೆ.
ಇದೇ ರೀತಿ ದೆಹಲಿ ಮರ್ಕಜ್ ತಬ್ಲಿಗಿ ಜಮಾತ್ ನಲ್ಲಿಯೂ ಗುಂಪು ಸೇರಿ ನಮಾಜ್ ಮಾಡಿರುವುದನ್ನು ಸ್ಮರಿಸಬಹುದು. ಇಂತಹ ಪ್ರಕರಣಗಳು ಲಾಕ್ ಡೌನ್ ನಡುವೆ ಅಲ್ಲಲ್ಲಿ ನಡೆಯುತ್ತಿದ್ದರೂ ಯಾರು ದಾಳಿ ಮಾಡಲು ಮುಂದಾಗಿರಲಿಲ್ಲ.
Click this button or press Ctrl+G to toggle between Kannada and English