ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ ಎರಡು ಕೋವಿಡ್-19 ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಒಬ್ಬರು ಗುರುವಾರ ಸಾವನ್ನಪ್ಪಿದ ಮಹಿಳೆಯ ನೆರೆಮನೆಯಲ್ಲಿ ವಾಸವಿದ್ದವರು, ಇನ್ನೊಬ್ಬರು ಕೋವಿಡ್-19 ಪಾಸಿಟಿವ್ ಆಗಿದ್ದ ಮಹಿಳೆಯ ಪತಿ ಎಂದು ತಿಳಿದು ಬಂದಿದೆ.
ಒಂದು ಪ್ರಕರಣ ಬಂಟ್ವಾಳದಲ್ಲಿ ದೃಢವಾದರೆ ಮತ್ತೊಂದು ಮಂಗಳೂರಿನ ಬೋಳೂರು ವ್ಯಕ್ತಿಗೆ ಸೋಂಕು ತಾಗಿರುವುದು ಖಚಿತವಾಗಿದೆ.
ಬಂಟ್ವಾಳದ 69 ವರ್ಷದ ವೃದ್ಧನಿಗೆ ಸೋಂಕು ದೃಢವಾಗಿದೆ. ಇವರಿಗೆ ಸೋಂಕಿತ ಸಂಖ್ಯೆ 390ರ ಸಂಪರ್ಕದಿಂದ ಸೋಂಕು ತಾಗಿದೆ. ಏಪ್ರಿಲ್ 19ರಂದು ಕೋವಿಡ್-19 ಸೋಂಕಿಗೆ ಬಲಿಯಾದ ಮಹಿಳೆಯ ಸಂಬಂಧಿಯಾಗಿರುವ ಇವರು ಸಾವನ್ನಪ್ಪಿದ ಮಹಿಳೆಯ ನೆರೆಮನೆಯಲ್ಲಿ ವಾಸವಿದ್ದರು.
ಮತ್ತೋರವ ಸೋಂಕಿತ 62 ವರ್ಷದ ಪುರುಷ ಮಂಗಳೂರಿನ ನಿವಾಸಿ. ಗುರುವಾರ ಕೋವಿಡ್-19 ಪಾಸಿಟಿವ್ ಆಗಿದ್ದ ಮಹಿಳೆಯ ( ಪಿ 536)ರ ಪತಿಯಾಗಿರುವ ಇವರಿಗೂ ಸೋಂಕು ದೃಢವಾಗಿದೆ.
ರಾಜ್ಯದಲ್ಲಿ ಕೊವಿಡ್-19 ಸೋಂಕಿತರ ಸಂಖ್ಯೆ 589ಕ್ಕೆ ಏರಿಕೆಯಾಗಿದೆ. ಇದರಲ್ಲಿ 251 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 22 ಜನರು ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ. ಮತ್ತು ಓರ್ವ ಸೋಂಕಿತ ಕೋವಿಡ್-19 ಅಲ್ಲದ ಕಾರಣದಿಂದ ಸಾವನ್ನಪ್ಪಿದ್ದಾರೆ.
Click this button or press Ctrl+G to toggle between Kannada and English