ದಾವಣಗೆರೆ: ದಾವಣಗೆರೆಯಲ್ಲಿ ಮಾರಕ ಕೊರೋನಾ ವೈರಸ್ ಗೆ ಮೊದಲ ಬಲಿಯಾಗಿದ್ದು, 69 ವರ್ಷದ ವೃದ್ಧರೊಬ್ಬರು ಶುಕ್ರವಾರ ಮೃತಪಟ್ಟಿದ್ದಾರೆ.
ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ (ರೋಗಿ ಸಂಖ್ಯೆ 556) ಇಂದು ರಾತ್ರಿ ಸಾವನ್ನಪ್ಪಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾಗೆ ಮೃತಪಟ್ಟವರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ.
ಜಾಲಿನಗರದ ನಿವಾಸಿಯಾಗಿದ್ದ ವ್ಯಕ್ತಿ ಮೂರು ದಿನಗಳ ಹಿಂದೆ ಉಸಿರಾಟದ ಸಮಸ್ಯೆಯಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು, ಈ ವ್ಯಕ್ತಿಗೆ ಕೊರೋನಾ ಹೇಗೆ ಬಂದಿದೆ ಎನ್ನುವುದು ತಿಳಿದಿಲ್ಲ. ವೃದ್ಧನ ಟ್ರಾವೆಲ್ ಹಿಸ್ಟರಿಯನ್ನು ಅಧಿಕಾರಿಗಳು ಕಲೆ ಹಾಕುತ್ತಿದ್ದಾರೆ. ಈ ವ್ಯಕ್ತಿಯಿಂದ 1 ವರ್ಷದ ಮಗು ಸೇರಿದಂತೆ 5 ಮಂದಿಗೆ ಕೊರೋನಾ ಹರಡಿದೆ. ವೃದ್ಧನ ಮೂರು ಮಂದಿ ಸೊಸೆಯಂದಿರು, ಓರ್ವ ಪುತ್ರ ಸೇರಿ ಒಂದು ವರ್ಷದ ಮೊಮ್ಮಗನಿಗೂ ಕೂಡ ಸೋಂಕು ತಗುಲಿದ್ದು ಎಲ್ಲರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಈ ನಡುವೆ ಜಿಲ್ಲೆಯಲ್ಲಿ ಸೋಂಕು ಪೀಡಿತರ ಸಂಪರ್ಕ ಹೊಂದಿದ್ದ ಸುಮಾರು 82 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಶನಿವಾರ ಅವರ ವರದಿ ಕೂಡ ಬಿಡುಗಡೆಯಾಗುವ ಸಾಧ್ಯತೆಯಿದೆ. ಇಲ್ಲಿಯವರೆಗೆ ದಾವಣಗೆರೆಯಲ್ಲಿ 10 ಮಂದಿಗೆ ಕೊರೋನಾ ಬಂದಿದ್ದು, ಇಬ್ಬರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 8 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಒಂದೇ ದಿನ 24 ಮಂದಿಗೆ ಪಾಸಿಟಿವ್, ಸೋಂಕಿತರ ಸಂಖ್ಯೆ 589ಕ್ಕೆ ಏರಿಕೆ
Click this button or press Ctrl+G to toggle between Kannada and English