ಮಂಗಳೂರು : ಆಶಾ ಕಾರ್ಯಕರ್ತೆಯರಿಗೆ ದಕ್ಷಿಣ ಕನ್ನಡ ಜಿಲ್ಲಾ ಕೆಮಿಸ್ಟ್ಸ್ ಮತ್ತು ಡ್ರಗ್ಗಿಸ್ಟ್ಸ್ ಅಸೋಸಿಯೇಷನ್ ವತಿಯಿಂದ ಉಚಿತವಾಗಿ 2,000 ಟೊಪ್ಪಿಗಳನ್ನು (ಕ್ಯಾಪ್ ) ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಮೂಲಕ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ, ಜಿಲ್ಲಾ ಪಂಚಾಯತ್ ಸದಸ್ಯ ಜನಾರ್ಧನ ಗೌಡ ಮತ್ತು ಕೆಮಿಸ್ಟ್ಸ್ ಮತ್ತು ಡ್ರಗ್ಗಿಸ್ಟ್ಸ್ ಅಸೋಸಿಯೆಷನ್ ಅಧ್ಯಕ್ಷ ಶ್ರೀಧರ್ ಕಾಮತ್, ಕಾರ್ಯದರ್ಶಿ ಗಣೇಶ್ ಕಾಮತ್, ಸಂತೋಷ ಕಾಮತ್, ಸಂಜಯ್ ಕಾಮತ್ ಉಪಸ್ಥಿತರಿದ್ದರು.
Click this button or press Ctrl+G to toggle between Kannada and English