ದ.ಕ ಜಿಲ್ಲೆಯಲ್ಲಿ ಇಬ್ಬರು ಬಾಲಕಿಯರು ಸೇರಿ, ಒಟ್ಟು ಮೂವರಿಗೆ ಕೊರೊನಾ ಪಾಸಿಟಿವ್

1:36 PM, Wednesday, May 6th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Corona Dakshinakannadaಮಂಗಳೂರು : ದ.ಕ ಜಿಲ್ಲೆಯಲ್ಲಿ ಮತ್ತೆ ಮೂರು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು 28 ಪ್ರಕರಣ ಪತ್ತೆಯಾದಂತಾಗಿದೆ. ಸದ್ಯ 13 ಸಕ್ರಿಯಕೊರೊನಾ ಪ್ರಕರಣಗಗಳಿವೆ.

ಫಸ್ಟ್ ನ್ಯೂರೋ ಆಸ್ಪತ್ರೆ ಯ ಸಂಪರ್ಕ ಹೊಂದಿದ್ದ P-536 ಮಹಿಳೆಯಿಂದ ಇಬ್ಬರಿಗೆ ಸೋಂಕು ಹರಡಿರುವುದು ಖಚಿತವಾಗಿದೆ. ಬೋಳೂರು ನಿವಾಸಿಗಳಾದ 38 ವರ್ಷದ ಮಹಿಳೆ ಹಾಗೂ 11 ವರ್ಷದ ಬಾಲಕಿಗೆ ಸೋಂಕು ಇರುವುದು ದೃಢಪಟ್ಟಿದೆ.

ಬಂಟ್ವಾಳದ ಪಿ – 360 ರ ಸಂಪರ್ಕದಲ್ಲಿದ್ದ ಮೃತ ಮಹಿಳೆಯ 16 ವರ್ಷದ ಮಗಳಿಗೂ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಬಾಲಕಿಯನ್ನು ಎನ್, ಐ ಟಿ ಕೆ ಯಲ್ಲಿ ವೈದ್ಯಕೀಯ ನಿಗಾದಲ್ಲಿ ಇರಿಸಲಾಗಿದೆ. ಇವರ 12ನೇ ದಿನದ ಗಂಟಲು ದ್ರವದ ವರದಿ ಬಂದಿದ್ದು ಅದರಲ್ಲಿ ಸೊಂಕು ಇರುವುದು ಖಚಿತವಾಗಿದೆ.

ಜಿಲ್ಲೆಯಲ್ಲಿ ಸದ್ಯ 13 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ ಜಿಲ್ಲೆಯಲ್ಲಿ ಮೂವರು ಮೃತಪಟ್ಟಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English