ಮದ್ಯ ಮಾರಾಟ ಅಧಿಕ ದರ ವಸೂಲಿ ಮಾಡಿದರೆ ಲೈಸನ್ಸ್ ರದ್ದು : ಸಚಿವರ ಎಚ್ಚರಿಕೆ

10:59 PM, Friday, May 8th, 2020
Share
1 Star2 Stars3 Stars4 Stars5 Stars
(No Ratings Yet)
Loading...

KotaSrinivas ಮಂಗಳೂರು  : ಜಿಲ್ಲೆಯ ಮದ್ಯದಂಗಡಿಗಳಲ್ಲಿ ನಿಗದಿತ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬರುತ್ತಿದೆ. ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.

ಅವರು ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿ ನಡೆದ ಸಭೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿ, ಅಧಿಕ ದರ ವಸೂಲಿ ಮಾಡುವ ಪ್ರಕರಣ ಕಂಡು ಬಂದರೆ ಅಂತಹ ಮದ್ಯದಂಗಡಿಗಳ ಪರವಾನಿಗೆ ರದ್ದುಪಡಿಸಲು ಸೂಚನೆ ನೀಡಿದರು.

ಈ ಬಗ್ಗೆ ಅಬಕಾರಿ ಅಧಿಕಾರಿಗಳು ಎಲ್ಲಾ ಮದ್ಯದಂಗಡಿಗಳ ಮೇಲೆ ನಿಗಾವಹಿಸಲು ಅವರು ಸೂಚಿಸಿದರು.

ಅಬಕಾರಿ ಉಪ ಆಯುಕ್ತೆ ಶೈಲಜಾ ಕೋಟೆ ಮಾತನಾಡಿ, ಮದ್ಯದಂಗಡಿ, ಬಾರ್ ಗಳಲ್ಲಿ ಅಧಿಕ ದರ ವಸೂಲಿ ಪ್ರಕರಣ ಕಂಡುಬಂದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವುದಾಗಿ ತಿಳಿಸಿದರು

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English