- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಮದ್ಯ ಮಾರಾಟ ಅಧಿಕ ದರ ವಸೂಲಿ ಮಾಡಿದರೆ ಲೈಸನ್ಸ್ ರದ್ದು : ಸಚಿವರ ಎಚ್ಚರಿಕೆ

KotaSrinivas [1]ಮಂಗಳೂರು  : ಜಿಲ್ಲೆಯ ಮದ್ಯದಂಗಡಿಗಳಲ್ಲಿ ನಿಗದಿತ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬರುತ್ತಿದೆ. ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.

ಅವರು ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿ ನಡೆದ ಸಭೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿ, ಅಧಿಕ ದರ ವಸೂಲಿ ಮಾಡುವ ಪ್ರಕರಣ ಕಂಡು ಬಂದರೆ ಅಂತಹ ಮದ್ಯದಂಗಡಿಗಳ ಪರವಾನಿಗೆ ರದ್ದುಪಡಿಸಲು ಸೂಚನೆ ನೀಡಿದರು.

ಈ ಬಗ್ಗೆ ಅಬಕಾರಿ ಅಧಿಕಾರಿಗಳು ಎಲ್ಲಾ ಮದ್ಯದಂಗಡಿಗಳ ಮೇಲೆ ನಿಗಾವಹಿಸಲು ಅವರು ಸೂಚಿಸಿದರು.

ಅಬಕಾರಿ ಉಪ ಆಯುಕ್ತೆ ಶೈಲಜಾ ಕೋಟೆ ಮಾತನಾಡಿ, ಮದ್ಯದಂಗಡಿ, ಬಾರ್ ಗಳಲ್ಲಿ ಅಧಿಕ ದರ ವಸೂಲಿ ಪ್ರಕರಣ ಕಂಡುಬಂದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವುದಾಗಿ ತಿಳಿಸಿದರು