ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸ್ನಾತಕೋತ್ತರ ಪದವಿ ಸೀಟುಗಳ ಶುಲ್ಕ ಹೆಚ್ಚಳ – ಖಂಡನೆ

12:00 AM, Saturday, May 9th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Madhuri Bolarಮಂಗಳೂರು :  ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸ್ನಾತಕೋತ್ತರ ಪದವಿ ಸೀಟುಗಳ ಶುಲ್ಕ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದನ್ನು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ದ.ಕ. ಜಿಲ್ಲಾ ಸಮಿತಿ ತೀವ್ರವಾಗಿ ವಿರೋಧ ವ್ಯಕ್ತಪಡಿಸುತ್ತದೆ.

COVID 19 ಲಾಕ್ ಡೌನ್ ನಿಂದಾಗಿ ಜನರ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ.ಈ ಸಂದರ್ಭದಲ್ಲಿ ಸರಕಾರ ಜನರ ಜೊತೆ ನಿಲ್ಲಬೇಕೆ ಹೊರತು ಜನರನ್ನು ಸಂಕಷ್ಟಕ್ಕೀಡುಮಾಡಬಾರದು. ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸ್ನಾತಕೋತ್ತರ ಪದವಿ ಸೀಟುಗಳ ಶುಲ್ಕ ಹಚ್ಚಳ ಮಾಡಿ ವೈದ್ಯಕೀಯ ಶಿಕ್ಷಣದ ವ್ಯಾಪಾರೀಕರಣವನ್ನು ಸರಕಾರ ಪ್ರೋತ್ಸಾಹಿಸುತ್ತಿದೆ ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ ನ ದ.ಕ. ಜಿಲ್ಲಾಧ್ಯಕ್ಷೆ ಮಾಧುರಿ ಬೋಳಾರ್ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.

ಸರಕಾರ ವೈದ್ಯಕೀಯ ಸ್ನಾತಕೋತ್ತರ ಸೀಟುಗಳ ಶುಲ್ಕ ಹೆಚ್ಚಳದ ಆದೇಶ ಹೊರಡಿಸಿ ಬಡ ಮತ್ತು ಮಧ್ಯಮ ವರ್ಗದ ಕುಟುಂಬದಿಂದ ಬರುವ ವಿದ್ಯಾರ್ಥಿಗಳು ಶಿಕ್ಷಣದಿಂದ ಇನ್ನೂ ವಂಚಿತರಾಗಲಿದ್ದಾರೆ ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ ನ ಜಿಲ್ಲಾ ಕಾರ್ಯದರ್ಶಿ ವಿಕಾಸ್ ಕುತ್ತಾರ್ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

ಸರಕಾರ ಕೂಡಲೇ ಶುಲ್ಕ ಹೆಚ್ಚಳದ ಆದೇಶವನ್ನು ಹಿಂತೆಗೆದುಕೊಳ್ಳಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್.ಎಫ್.ಐ.) ದ.ಕ. ಜಿಲ್ಲಾ ಸಮಿತಿ ಆಗ್ರಹಿಸಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English