ಕೊರೊನಾ ಸೋಂಕಿನಿಂದ ಗುರುವಾರ ಕುಲಶೇಖರದ 80ರ ವೃದ್ಧೆ ಸಾವು

12:57 PM, Thursday, May 14th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Covid death Mangaloreಮಂಗಳೂರು : ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಗುರುವಾರ ಕುಲಶೇಖರದ 80ರ ವೃದ್ಧೆ ಮೃತಪಟ್ಟಿದ್ದಾರೆ. ಈ ವೃದ್ಧೆ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಈಕೆ ಅಧಿಕ ರಕ್ತದೊತ್ತಡ ಮತ್ತು ಪಾರ್ಶ್ವ ವಾಯು ಸಮಸ್ಯಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಆಸ್ಪತ್ರೆಯಲ್ಲಿದ್ದ ತಾಯಿ ಮತ್ತು ಮಗ ಇಬ್ಬರಿಗೂ ಕೋವಿಡ್-19 ಪಾಸಿಟಿವ್ ಆಗಿತ್ತು.

ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ  ಒಟ್ಟು ಐದು ಮಂದಿ  ಮೃತಪಟ್ಟಿದ್ದಾರೆ. ಬುಧವಾರ ಸೋಂಕಿನಿಂದ ಬಳಲುತ್ತಿದ್ದ ಬೋಳೂರಿನ 58ರ ಮಹಿಳೆ ಸಾವಿಗೀಡಾದ್ದಾರೆ. ಈಗ ಫಸ್ಟ್‌ ನ್ಯೂರೋ ಆಸ್ಪತ್ರೆ ಸಂಪರ್ಕದಿಂದ ಸೋಂಕಿತರಾದವರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.

ಇನ್ನು ಜಿಲ್ಲೆಯಲ್ಲಿ ಮೃತಪಟ್ಟವರೆಲ್ಲ ಮಹಿಳೆಯರೇ ಎನ್ನುವುದು ಆತಂಕಕಾರಿ ವಿಚಾರ.

ಜಿಲ್ಲೆಯಲ್ಲಿ ಕೊರೋನಾ ಪ್ರಕರಣ 34ಕ್ಕೆ ಏರಿಕೆಯಾಗಿದೆ. ಮೃತಪಟ್ಟವರೆಲ್ಲ ಮಹಿಳೆಯರೇ ಆಗಿದ್ದಾರೆ. ಸಕ್ರಿಯ 17 ಪ್ರಕರಣಗಳಿದ್ದು, 14 ಮಂದಿ ಗುಣಮುಖರಾಗಿದ್ದಾರೆ. . 16 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English