ಮಂಗಳೂರು : ಮಂಗಳವಾರ ದುಬೈನಿಂದ ಮಂಗಳೂರಿಗೆ ಆಗಮಿಸಿರುವ ಪ್ರಯಾಣಿಕರ ಪೈಕಿ 15 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ.
ಮೇ.12 ರಂದು ವಿಶೇಷ ವಿಮಾನದ ಮೂಲಕ ಬಂದಿಳಿದ 179 ಮಂದಿ ಪೈಕಿ, ದ.ಕ ದ ಮೂಲದ 69 ಜನರ ಗಂಟಲಿನ ದ್ರವ ತೆಗೆದು ಪರೀಕ್ಷೆಗೆ ಕಳುಹಿಸಲಾಗಿತ್ತು. ಪೈಕಿ 15 ಮಂದಿಗೆ ಕೊರೊನಾ ತಗುಲಿರುವುದು ಖಚಿತವಾಗಿದೆ. ಇವರಲ್ಲಿ 12 ಪುರುಷರಿಗೆ ಮತ್ತು 4 ಮಹಿಳೆಯರಿಗೆ ಸೋಂಕು ದೃಢವಾಗಿದೆ. ೧5 ಮಂದಿ ಪೈಕಿ ಓರ್ವರು ಉತ್ತರ ಕನ್ನಡ ಜಿಲ್ಲೆಯವರಾಗಿದ್ದಾರೆ.
ದುಬೈನಿಂದ ಬಂದ ವಿಮಾನದಲ್ಲಿ ದ.ಕ. ಜಿಲ್ಲೆಯ 96, ಉಡುಪಿ ಜಿಲ್ಲೆಯ 52 ಹಾಗೂ ಇತರ ಜಿಲ್ಲೆಗಳ 31 ಪ್ರಯಾಣಿಕರಿದ್ದರು. ಅವರಲ್ಲಿ 38 ಗರ್ಭಿಣಿಯರು, ವೈದ್ಯಕೀಯ ಚಿಕಿತ್ಸೆಗಾಗಿ ಬಂದವರು, ದುಬಾೖಯಲ್ಲಿ ಕೆಲಸ ಕಳೆದುಕೊಂಡವರು, ವೀಸಾ ಅವಧಿ ಮುಗಿದವರು, ಕುಟುಂಬ ಮೆಡಿಕಲ್ ಅಗತ್ಯ ಇರುವವರು, ಪ್ರವಾಸಕ್ಕೆ ಹೋಗಿ ಬಾಕಿಯಾದವರು ಇದರಲ್ಲಿ ಸೇರಿದ್ದಾರೆ
ದ.ಕ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ದುಬೈನಿಂದ ಬಂದ 179ಕರಾವಳಿಗರನ್ನು ಮನೆಗೆ ತೆರಳಲು ಹಾಗೂ ಯಾರನ್ನು ಸಂಪರ್ಕಿಸಿಲು ಬಿಡದೆ, ಕ್ವಾರಂಟೈನ್ ಗೆ ಒಳಪಡಿಸಿತ್ತು.
ದ.ಕ ಜಿಲ್ಲೆಯಲ್ಲಿ ಈವರೆಗೆ ಪತ್ತೆಯಾದ ಪಾಸಿಟಿವ್ ಕೇಸ್ ಗಳ ಸಂಖ್ಯೆ 50ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ 5 ಮಂದಿ ಬಲಿಯಾಗಿದ್ದಾರೆ
Click this button or press Ctrl+G to toggle between Kannada and English