ಮಂಗಳೂರು : ಸುರತ್ಕಲ್ ಗ್ರಾಮದ 68 ವರ್ಷದ ಮಹಿಳೆಗೆ ಕೊರೊನಾ ಸೋಂಕು ಇರುವುದು ಖಚಿತವಾಗಿದೆ . ಹೀಗಾಗಿ ಸುರತ್ಕಲ್ ಪ್ರದೇಶವನ್ನು ಕಂಟೋನ್ಮೆಂಟ್ ಮಾಡಲಿದ್ದೇವೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ತಿಳಿಸಿದ್ದಾರೆ.
ಸುರತ್ಕಲ್ ಮೂಲದ ಮಹಿಳೆಗೆ ಯಾವ ಮೂಲದಿಂದ ಸೋಂಕು ಹರಡಿದೆ ಎಂದು ಇನ್ನು ಖಚಿತವಾಗಿಲ್ಲ. ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರಲ್ಲಿ ತೀವ್ರ ಉಸಿರಾಟದ ಸಮಸ್ಯೆ ಕಂಡುಬಂದ ಹಿನ್ನಲೆಯಲ್ಲಿ ಕೊರೊನಾ ಪರೀಕ್ಷೆಗೆ ಒಳಪಡಿಸಿದಾದ ಸೋಂಕು ಖಚಿತವಾಗಿದೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ದುಬೈನಿಂದ ಆಗಮಿಸಿ ಪ್ರಯಾಣಿಕರ ಪೈಕಿ 15 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಮೂರು ಮಂದಿ ಈ ಪೈಕಿ 45 ವರ್ಷದ ಗಂಡ, 33 ವರ್ಷದ ಹೆಂಡತಿ 6 ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂರು ಮಂದಿಯಲ್ಲಿ ಸೋಂಕು ಇರುವುದು ಖಚಿತವಾಗಿದೆ. ಈ ವಿಮಾನದಲ್ಲಿ 38 ಮಂದಿ ಗರ್ಭಿಣಿಯರು ಬಂದಿದ್ದುಇವರಲ್ಲಿ ಸೋಂಕು ಕಂಡುಬಂದಿಲ್ಲ. ಅದರೂ ಮುನ್ನೆಚ್ಚರಿಕಾ ಕ್ರಮವಾಗಿ ನೆಗೆಟಿವ್ ಬಂದ ಎಲ್ಲಾ ಪ್ರಯಾಣಿಕರ 12ನೇ ದಿನದಂದು ಸ್ವಾಬ್ ಟೆಸ್ಟ್ ಮಾಡಲಿದ್ದೇವೆ ಎಂದು ಹೇಳಿದ್ದಾರೆ.
ಇನ್ನು ಮೇ 18 ರಂದು ದುಬೈನಿಂದ ಮತ್ತೊಂದು ವಿಮಾನ ಬರಲಿದ್ದು, 171 ಮಂದಿ ಪ್ರಯಾಣಿಕರು ಮಂಗಳೂರಿಗೆ ಬರುವ ಪ್ರಾಥಮಿಕ ಮಾಹಿತಿ ಬಂದಿದೆ. ಆದರೆ ಒಟ್ಟು ಎಷ್ಟು ಸಂಖ್ಯೆಯಲ್ಲಿ ಬರಲಿದ್ದಾರೆ ಎಂಬುವುದು ದ.ಕ ಜಿಲ್ಲಾಡಳಿತಕ್ಕೆ ಮಾಹಿತಿ ಬಂದಿಲ್ಲ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ತಿಳಿಸಿದ್ದಾರೆ.
Click this button or press Ctrl+G to toggle between Kannada and English