- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಅನ್ನದಾತನ ಹಿತರಕ್ಷಣೆ ಕಾಯ್ದ ಬಿಜೆಪಿ ಸರ್ಕಾರ :  ನಳಿನ್‌ಕುಮಾರ್ ಕಟೀಲ್

Nalin Kateel [1]ಮಂಗಳೂರು : ಕರೊನಾ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾದ ರೈತರ ಹಿತರಕ್ಷಣೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಹತ್ವದ ಯೋಜನೆಗಳನ್ನು ಘೋಷಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ 20 ಲಕ್ಷ ಕೋಟಿ ರೂ. ಪ್ಯಾಕೇಜ್‌ನಲ್ಲಿ ಕೃಷಿ ಮೂಲ ಸೌಕರ್ಯಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು1 ಲಕ್ಷ ಕೋಟಿ ರೂ. ಹಂಚಿಕೆ ಮಾಡಿರುವುದು ಅನ್ನದಾತನಿಗೆ ನೆರವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‌ಕುಮಾರ್ ಕಟೀಲ್ ಹೇಳಿದ್ದಾರೆ.

ಮೀನುಗಾರರಿಗೆ 20 ಸಾವಿರ ಕೋಟಿ ರೂ.ಮೀಸಲಿರಿಸಿದ್ದು, ಕರ್ನಾಟಕ ಕರಾವಳಿಯ ಮೀನುಗಾರರಿಗೂ ಇದರ ಪ್ರಯೋಜನ ದೊರೆಯಲಿದೆ. ಮತ್ಸೋದ್ಯಮ ಕ್ಷೇತ್ರದಲ್ಲಿ 65 ಲಕ್ಷ ಮಂದಿಗೆ ಉದ್ಯೋಗ ಸೃಷ್ಟಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿರುವುದು ಕರಾವಳಿಗೆ ವರದಾನವಾಗಲಿದೆ. ಡೇರಿ ಉತ್ಪನ್ನಗಳಿಗೆ ಗುಣಮಟ್ಟ ಹೆಚ್ಚಳಕ್ಕೆ 15 ಸಾವಿರ ಕೋಟಿ ರೂಪಾಯಿ ಮೀಸಲಿಟ್ಟಿರುವುದು ಹೈನುಗಾರಿಕೆಗೆ ಇನ್ನಷ್ಟು ಪ್ರೋತ್ಸಾಹ ನೀಡಿದಂತಾಗಿದೆ. ಕೃಷಿ ಮಾರುಕಟ್ಟೆಗೆ ಸುಧಾರಣೆ ತರಲು ಕೇಂದ್ರ ಸರ್ಕಾರ ಉತ್ತಮ ಕ್ರಮ ಕೈಗೊಂಡಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ರೈತರು, ಕಾರ್ಮಿಕರು ಸೇರಿದಂತೆ ದುಡಿಯುವ ಮಂದಿಗೆ 1,610 ಕೋಟಿ ರೂ.ಗಳ ಪ್ಯಾಕೇಜ್ ಘೋಷಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಎರಡನೇ ಹಂತದಲ್ಲಿ ತರಕಾರಿ ಬೆಳೆಗಾರರ ಹಾಗೂ ನೇಕಾರರ ಸಮಸ್ಯೆಗೆ ಸ್ಪಂದಿಸಿ 162 ಕೋಟಿ ರೂ. ಪ್ಯಾಕೇಜ್ ಘೋಷಿಸಿ ನೆರವಿಗೆ ನಿಂತಿದ್ದಾರೆ. ಎಪಿಎಂಸಿ ಕಾಯ್ದೆ ತಿದ್ದುಪಡಿ ರೈತರಿಗೆ ವರದಾನವಾಗಲಿದೆ. ಇದರಿಂದ ರೈತರಿಗೆ ತಮ್ಮ ಉತ್ಪನ್ನಗಳಿಗೆ ಯೋಗ್ಯ ಧಾರಣೆ ದೊರೆಯುವ ಅವಕಾಶ ಕಲ್ಪಿಸಿದಂತಾಗಿದೆ. ಕರೊನಾ ಸೋಂಕು ಹರಡದಂತೆ ತಡೆಯಲು ದುಡಿದ ಆಶಾ ಕಾರ್ಯಕರ್ತೆಯರಿಗೆ ೩ ಸಾವಿರ ಪ್ರೋತ್ಸಾಹ ಧನ ಘೋಷಿಸಿರುವುದು ಸ್ವಾಗತಾರ್ಹ ಎಂದು ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.