ಬೆಂಗಳೂರು : ದ್ವಿತೀಯ ಪಿಯುಸಿ ಇಂಗ್ಲಿಷ್ ಭಾಷಾ ಪರೀಕ್ಷೆಯನ್ನು ಜೂನ್ ತಿಂಗಳಲ್ಲಿ ನಡೆಸಲು ಶಿಕ್ಷಣ ಇಲಾಖೆ ತಯಾರಿ ನಡೆಸಿದೆ. ಲಾಕ್‌ಡೌನ್‌ನಿಂದಾಗಿ ವಿದ್ಯಾರ್ಥಿಗಳು ಯಾವ ಯಾವ ಜಿಲ್ಲೆಗಳಲ್ಲಿ ಸಿಲುಕಿಕೊಂಡಿದ್ದಾರೋ ಅಲ್ಲೇ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ಶನಿವಾರ ಸುತ್ತೋಲೆ ಹೊರಡಿಸಿದೆ.
ದೇಶದಲ್ಲಿ ಲಾಕ್‌ಡೌನ್ ಘೋಷಣೆಯಾಗುವ ಮುಂಚೆ ದ್ವಿತೀಯ ಪಿಯುಸಿ ಯ ಎಲ್ಲಾ ಪರೀಕ್ಷೆಗಳು ಮುಗಿದಿದ್ದವು. ಆದರೆ, ಆಂಗ್ಲ ಭಾಷೆ ಪತ್ರಿಕೆ ಮಾತ್ರ ಉಳಿದಿತ್ತು. ಈ ಸಂದರ್ಭದಲ್ಲಿ ಲಾಕ್‌ಡೌನ್ ಘೋಷಿಸಿದ ಪರಿಣಾಮ ಈ ಒಂದು ಪತ್ರಿಕೆಯ ಪರೀಕ್ಷೆಯನ್ನು ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಸಾಧ್ಯವಾಗಿರಲಿಲ್ಲ. ಹೀಗಾಗಿ ಮಾರ್ಚ್ 23ನೇ ತಾರೀಕಿನಂದೇ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿ ಶಿಕ್ಷಣ ಸಚಿವ ಸುರೇಶ್ ಕುಮಾರ್‌ಆದೇಶ ಹೊರಡಿಸಿದ್ದರು. ಇದರ ಜೊತೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನೂ ಮುಂದೂಡಲಾಗಿತ್ತು.
ಇದೀಗ ದೇಶದಾದ್ಯಂತ ಲಾಕ್‌ಡೌನ್ ಅನ್ನು ಹಂತ ಹಂತವಾಗಿ ತೆರವುಗೊಳಿಸಲಾಗುತ್ತಿದೆ. ಕರ್ನಾಟಕದಲ್ಲೂ ಲಾಕ್‌ಡೌನ್ ಬಹುತೇಕ ತೆರವಾಗಿದೆ. ಆದರೆ, ಸಾರ್ವಜನಿಕ ಸಂಚಾರಕ್ಕೆ ಮಾತ್ರ ಈವರೆಗೆ ಅವಕಾಶ ನೀಡಲಾಗಿಲ್ಲ. ಹೀಗಾಗಿ ವಿದ್ಯಾರ್ಥಿಗಳು ವಿವಿಧ ಕಡೆಗಳಲ್ಲಿ ಸಿಲುಕಿಕೊಂಡಿದ್ದಾರೆ. ಹೀಗಾಗಿ ಜೂನ್ ತಿಂಗಳಲ್ಲಿ ಪರೀಕ್ಷೆ ನಡೆಸಲು ನಿರ್ಧರಿಸಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳು ಎಲ್ಲಿದ್ದಾರೋ ಅದೇ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲು ಅನುಮತಿ ನೀಡಿದೆ.
Click this button or press Ctrl+G to toggle between Kannada and English