ಬೆಳ್ತಂಗಡಿ : ಬಂಗ್ಲೆಗುಡ್ಡೆ ಕಾಡಿನಲ್ಲಿ ನಿನ್ನೆ ಶವಶೋಧ ಕಾರ್ಯಾಚರಣೆ ವೇಳೆ ಸಿಕ್ಕ ಅಸ್ಥಿಪಂಜರ ಹಾಗೂ ಅವಶೇಷಗಳು ಬಳಿ ಒಂದು ಐಡಿ ಕಾರ್ಡ್ ಸಿಕ್ಕಿದ್ದು, ಅದರ ಮಾಹಿತಿ ಇದೀಗ ಬಹಿರಂಗವಾಗಿದೆ.
ಬಂಗ್ಲೆಗುಡ್ಡದಲ್ಲಿ ಪತ್ತೆಯಾದ ತಲೆ ಬುರುಡೆ ಮತ್ತು ಅಸ್ಥಿಪಂಜರದ ಬಳಿ ಪತ್ತೆಯಾದ ಐಡಿ ಕಾರ್ಡ್ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಗ್ರಾಮದ ನಿವಾಸಿ ಅಯ್ಯಪ್ಪ ಅವರದ್ದು ಎನ್ನುವುದು ತಿಳಿದುಬಂದಿದೆ. 2017ರಲ್ಲಿ ಮೈಸೂರಿನ ಆಸ್ಪತ್ರೆಗೆ ಹೋಗುವುದಾಗಿ ಹೇಳಿ ಹೋಗಿದ್ದ ಅಯ್ಯಪ್ಪ, ಅಂದಿನಿಂದ ಕಾಣೆಯಾಗಿದ್ದರು. ಈ ಬಗ್ಗೆ ಕುಟುಂಬಸ್ಥರು, ಕುಟ್ಟ ಪೊಲೀಸ್ ಠಾಣೆಗೆ ದೂರು ಸಹ ನೀಡಿದ್ದರು. ಹೀಗಾಗಿ ಸಿಕ್ಕ ಅಸ್ಥಿಪಂಜರ ಸಹ ಅಯ್ಯಪ್ಪನವರದ್ದೇ ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಅಯ್ಯಪ್ಪ ಕಾಣೆಯಾಗಿರುವ ಬಗ್ಗೆ ಅವರ ಪುತ್ರ ಜೀವನ್ ಎನ್ನುವರು ನೀಡಿದ ದೂರಿನ ಬಗ್ಗೆ 15-06-2017ರಂದು ಕುಟ್ಟ ಠಾಣೆ ಎಫ್ಐಆರ್ ದಾಖಲಾಗಿತ್ತು. ಆಸ್ಪತ್ರೆಗೆಂದು ಬೆಳಗ್ಗೆ 6 ಗಂಟೆಗೆ ಮನೆ ಬಿಟ್ಟಿದ್ದ ಅಯ್ಯಪ್ಪ, ಬೆಳಗ್ಗೆ 11.30ರ ನಂತರ ಅವರ ಮೊಬೈಲ್ ಸ್ವಿಚ್ ಅಫ್ ಆಗಿತ್ತು. ಇದಾದ ಬಳಿಕ ಕುಟುಂಬ ಒಂದು ವಾರ ಹುಡುಕಾಡಿತ್ತು. ಕೊನೆಗೆ ಅಯ್ಯಪ್ಪ ಸುಳಿವು ಸಿಗದಿದ್ದಾಗ ಜೀವನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದ್ರೆ, ದೂರು ನೀಡಿದರೂ ಸಹ ಅಯ್ಯಪ್ಪ ಸುಳಿವು ಸಹ ಸಿಕ್ಕಿರಲಿಲ್ಲ. ಇದೀಗ ಎಂಟು ವರ್ಷಗಳ ಬಳಿಕ ಬಂಗ್ಲೆಗುಡ್ಡೆಯಲ್ಲಿ ಅಯ್ಯಪ್ಪ ಅವರ ಐಡಿ ಕಾರ್ಡ್ ಪತ್ತೆಯಾಗಿದೆ. ಇನ್ನೂ ಬಂಗ್ಲೆಗುಡ್ಡದಲ್ಲಿ ಪತ್ತೆಯಾದ ಅಸ್ಥಿಪಂಜರಗಳು ಆತ್ಮಹತ್ಯೆಯ ಸ್ಥಿತಿಯಲ್ಲಿತ್ತು ಎನ್ನುವುದು ಮೇಲ್ನೋಟಕ್ಕೆ ಗೊತ್ತಾಗಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









