ಉಡುಪಿಯ 7 ತಿಂಗಳ ಗರ್ಭಿಣಿಯಲ್ಲಿ ಕೊರೊನಾ ಸೋಂಕು ಪತ್ತೆ
6:23 PM, Monday, May 18th, 2020
Loading...
ಉಡುಪಿ : ಸೋಮವಾರ ಉಡುಪಿಯಲ್ಲಿ 7 ತಿಂಗಳ ಗರ್ಭಿಣಿಯಲ್ಲಿ ಕೊರೊನಾ ದೃಢಪಟ್ಟಿದೆ.
ಮಹಾರಾಷ್ಟ್ರದ ಮುಂಬೈ ನಿಂದ ಆಗಮಿಸಿ ಕ್ವಾರಂಟೈನ್ ನಲ್ಲಿದ್ದ ಉಡುಪಿಯ ಜಿಲ್ಲೆಯ ಕೊಲ್ಲೂರಿನ 28 ವರ್ಷದ ಮಹಿಳೆಗೆ ಕೊರೊನಾ ದೃಢವಾಗಿದೆ.
ಉಡುಪಿಯಲ್ಲಿ 11 ಕೊರೊನಾ ಪ್ರಕರಣ ದೃಢಪಟ್ಟಿದ್ದು ಈ ಪೈಕಿ 3 ಮಂದಿ ಗುಣಮುಖರಾಗಿದ್ದಾರೆ. 7 ಸಕ್ರಿಯ ಪ್ರಕರಣಗಳಿದ್ದು ಓರ್ವ ಮೃತಪಟ್ಟಿದ್ದಾನೆ.