ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ದ.ಕ ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಮಹಾರಾಷ್ಟ್ರದ ರಾಯಗಡದಿಂದ ಆಗಮಿಸಿ ಕ್ವಾರೆಂಟೈನ್ ನಲ್ಲಿದ್ದ 30 ವರ್ಷದ ವ್ಯಕ್ತಿ ಹಾಗೂ ಮಂಗಳೂರಿನ ಯಯ್ಯಾಡಿ ನಿವಾಸಿಯಾಗಿರುವ 55 ವರ್ಷದ ಮಹಿಳೆಯೂ ತೀವ್ರ ಉಸಿರಾಟದ ತೊಂದರೆ (SARI) ಹಾಗೂ ಜ್ವರದಿಂದ ಬಳಲುತ್ತಿದ್ದು, ತಪಾಸಣೆಗೆಂದು ಕೋವಿಡ್ ಆಸ್ಪತ್ರೆಗೆ ಬಂದಾಗ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ 54 ಕೊರೊನಾ ಪ್ರಕರಣ ದೃಢಪಟ್ಟಿದ್ದು, ಇದರಲ್ಲಿ 48 ಪ್ರಕರಣಗಳು ಜಿಲ್ಲೆಯ ನಿವಾಸಿಗಳದ್ದಾಗಿದೆ. ಈ ಪೈಕಿ 10 ಮಂದಿ ಗುಣಮುಖರಾಗಿದ್ದಾರೆ. 32 ಸಕ್ರಿಯ ಪ್ರಕರಣಗಳಿದ್ದು, ಐವರು ಮೃತಪಟ್ಟಿದ್ದಾರೆ.
Click this button or press Ctrl+G to toggle between Kannada and English