ಮಂಗಳೂರು : ಕರ್ನಾಟಕ ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಧ್ಯಾಬ್ಯಾಸ ಮಾಡುತ್ತಿರುವ ಕೇರಳದ ಕಾಸರಗೋಡು ಜಿಲ್ಲೆಯ ವಿಧ್ಯಾರ್ಥಿಗಳಿಗೆ ಎಸ್.ಎಲ್.ಎಲ್.ಸಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಅವಕಾಶ ಮಾಡಿಕೊಡುವಂತೆ ಈ ದಿನ ಬೆಂಗಳೂರಿನಲ್ಲಿ ಮಾನ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ರವರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಬೇಟಿ ಮಾಡಿ ಮಾತುಕತೆ ನಡೆಸಿದರು.
ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ಮಾನ್ಯ ಸಚಿವರು ನೀಡಿದರು. ಈ ಸಮಸ್ಯೆ ಬಗ್ಗೆ ಮಂಜೇಶ್ವರ ಮಂಡಲ ಬಿಜೆಪಿ ಅಧ್ಯಕ್ಷ ಮಣಿಕಂಠ ರೈ ಬಂಟ್ವಾಳ ಶಾಸಕರ ಗಮನಕ್ಕೆ ತಂದಿದ್ದರು.
Click this button or press Ctrl+G to toggle between Kannada and English