ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2010ರ ಮೇ 22ರ ಮುಂಜಾನೆ ಏರ್ ಇಂಡಿಯಾ ವಿಮಾನ ರನ್‌ವೇಯಿಂದ ಜಾರಿ ಕೆಳಕ್ಕೆ ಬಿದ್ದು ಸಂಭವಿಸಿದ ಮಹಾ ದುರಂತಕ್ಕೆ ಶುಕ್ರವಾರಕ್ಕೆ 10 ವರ್ಷ ಪೂರ್ಣವಾಗುತ್ತದೆ. ದೇಶದ ನಾಗರಿಕ ವಿಮಾನಯಾನ ರಂಗದಲ್ಲಿಯೇ ಇದೊಂದು ಮರೆಯಲಾಗದ ದುರಂತ.
ದುರಂತದಲ್ಲಿ ಪೈಲಟ್, ಸಿಬಂದಿ ಸೇರಿ 158 ಮಂದಿ ಮೃತಪಟ್ಟಿದ್ದರು. ಆ ವಿಮಾನದಲ್ಲಿ ಒಟ್ಟು 135 ಮಂದಿ ವಯ ಸ್ಕರು, 19 ಮಕ್ಕಳು ಹಾಗೂ 4 ಶಿಶುಗಳು, 6 ಮಂದಿ ವಿಮಾನ ಸಿಬಂದಿ ಸೇರಿ ಒಟ್ಟು 166 ಮಂದಿ ಪ್ರಯಾಣಿಸುತ್ತಿದ್ದರು. 8 ಮಂದಿ ಬದುಕುಳಿದಿದ್ದರು. ಮೃತಪಟ್ಟವ ರಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೇರಳದವರಿದ್ದರು.
ವಿಮಾನ ದುರಂತದ ವಾರ್ಷಿಕ ಸಂಸ್ಮರಣೆ ಕಾರ್ಯಕ್ರಮ ದಿನಾಂಕ: 22-05-2020 ರಂದು ಬೆಳಿಗ್ಗೆ 9.30 ಗಂಟೆಗೆ ಕೂಳೂರು – ತಣ್ಣೀರುಬಾವಿ ರಸ್ತೆಯಲ್ಲಿರುವ ಸ್ಮಾರಕ ಸ್ಥಳದಲ್ಲಿ ನಡೆಯಲಿದೆ.
Click this button or press Ctrl+G to toggle between Kannada and English