ಪುತ್ತೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದೇಶದ ಆರ್ಥಿಕತೆ ಕುಸಿತವಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಲದ ಮೇಲಿನ ಕಂತುಗಳ ಪಾವತಿಗೆ ಮತ್ತೆ ಮೂರು ತಿಂಗಳ ಕಾಲ ವಿನಾಯಿತಿ ನೀಡಲಾಗಿದೆ ಎಂದು ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ.
ದೇಶದಾದ್ಯಂತ ಲಾಕ್ ಡೌನ್ 4.0 ಹೇರಿಕೆಯಾಗಿರುವ ಬೆನ್ನಲ್ಲೇ ಸುದ್ದಿಗೋಷ್ಟಿ ನಡೆಸಿರುವ ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್, ಈ ಹಿಂದೆ ಮೇ 31ರ ವರೆಗೂ ಇಎಂಐ ಪಾವತಿಗೆ ಮೂರು ತಿಂಗಳ ವಿನಾಯಿತಿಯನ್ನು ನೀಡಲಾಗಿತ್ತು. ಆದ್ರೀಗ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಮತ್ತೆ ಮೂರು ತಿಂಗಳ ವಿನಾಯಿತಿಯನ್ನು ನೀಡಲಾಗಿದ್ದು, ಅಗಸ್ಟ್ ಅಂತ್ಯದ ವರೆಗೂ ಸಾಲದ ಕಂತು ಪಾವತಿಗೆ ವಿನಾಯಿತಿಯನ್ನು ನೀಡಲಾಗಿದೆ.
ಗೃಹ, ವಾಹನ, ವೈಯಕ್ತಿಯ ಸಾಲ ಸೇರಿದಂತೆ ಎಲ್ಲಾ ರೀತಿಯ ಸಾಲದ ಇಎಂಐ ಪಾವತಿಗೆ ವಿನಾಯಿತಿಯನ್ನು ನೀಡಲಾಗಿದೆ. ಅಲ್ಲದೇ ಕ್ರಿಡಿಟ್ ಕಾರ್ಡ್ ಇಎಂಐ ಪಾವತಿಗೂ ವಿನಾಯಿತಿಯನ್ನು ನೀಡಲಾಗಿದೆ. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ರೇಪೋದರಲ್ಲಿ ಭಾರೀ ಇಳಿಕೆ ಮಾಡಿದೆ. ಪ್ರಮುಖವಾಗಿ ರೆಪೋ 40 ಬೇಸಿಸ್ ಪಾಯಿಂಟ್ ಕಡಿತ ಮಾಡಿದ್ದು, ರೇಪೋದರವನ್ನು ಶೇ.4.4ರಿಂದ ಶೇ.4ಕ್ಕೆ ಇಳಿಕೆ ಮಾಡಲಾಗಿದೆ.
ಇನ್ನು ರಿಸರ್ವ್ ರೆಪೋದರ ಕೂಡ ಇಳಿಕೆಯಾಗಿದ್ದು ಶೇ.3.75 ಯಿಂದ ಶೇ.3.50 ಗೆ ಇಳಿಕೆಯಾಗಲಿದೆ. ಹೀಗಾಗಿ ವಾಹನ, ಗೃಹ ಹಾಗೂ ವೈಯಕ್ತಿಕ ಸಾಲದ ಮೇಲಿನ ಬಡ್ಡಿದರವನ್ನು ಇಳಿಕೆಯಾಗಲಿದೆ. ರೆಪೋದರ ಇಳಕೆಯಾಗುವುದರಿಂದ ಬ್ಯಾಂಕುಗಳಿಗೂ ಕೂಡ ಅನುಕೂಲವಾಗಲಿದೆ
Click this button or press Ctrl+G to toggle between Kannada and English