ಮಂಗಳೂರು : ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ದುರಂತದಲ್ಲಿ ಮಡಿದವರ ಸ್ಮರಣಾರ್ಥ ಇಂದು ಕೂಳೂರು- ತಣ್ಣೀರುಬಾವಿ ರಸ್ತೆಯಲ್ಲಿರುವ ಸ್ಮಾರಕ ಸ್ಥಳದಲ್ಲಿ ವಾರ್ಷಿಕ ಸಂಸ್ಮರಣೆ ಕಾರ್ಯಕ್ರಮ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್, ಸಂಸದ ನಳಿನ್ ಕುಮಾರ್ ಕಟೀಲ್, ಡಿಸಿಪಿ ಲಕ್ಷ್ಮಿ ಗಣೇಶ್ , ವಿಮಾನ ನಿಲ್ದಾಣ ಸಿಬ್ಬಂದಿಗಳು ಸೇರಿದ್ದ ಕಾರ್ಯಕ್ರಮದಲ್ಲಿ ವಿಮಾನ ದುರಂತದಲ್ಲಿ ಅಗಲಿದವರಿಗೆ ಶೃದ್ದಾಂಜಲಿ ಸಮರ್ಪಿಸಲಾಯಿತು.
ಹತ್ತು ವರ್ಷದ ಹಿಂದೆ ಅಂದರೆ 2010 ಮೇ 22 ರಂದು ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ವಿಮಾನ ರನ್ ವೇಯಲ್ಲಿ ನಿಲ್ಲದೆ ಸೂಚನಗೋಪುರಕ್ಕೆ ಢಿಕ್ಕಿ ಹೊಡೆದು ಪ್ರಪಾತಕ್ಕೆ ಬಿದ್ದಿತ್ತು. ಘಟನೆಯಲ್ಲಿ 158 ಮಂದಿ ಸಾವನ್ನಪ್ಪಿ, ಎಂಟು ಜನರು ಪವಾಡಸದೃಶ ರೀತಿ ಬದುಕುಳಿದಿದ್ದರು.
Click this button or press Ctrl+G to toggle between Kannada and English