ಮಂಗಳೂರು : ಲಾಕ್ ಡೌನ್ ಕ್ರಮಗಳ ಕುರಿತು ಹೊಸ ಮಾರ್ಗ ಸೂಚಿಯನ್ನು ಹೊರಡಿಸಿದ್ದು ಮೇ 18 ರಿಂದ ಮೇ 31 ರ ವರೆಗೆ ಭಾನುವಾರ ದಂದು ಸಂಪೂರ್ಣ ಲಾಕ್ ಡೌನ್ ಇರುತ್ತದೆ. ಮೇ 23ರ ಶನಿವಾರ ಸಂಜೆ 7 ಗಂಟೆಯಿಂದ ಮೇ 25ರ ಸೋಮವಾರ ಮುಂಜಾನೆ 7 ಗಂಟೆಯವರೆಗೆ ದ.ಕ. ಜಿಲ್ಲಾದ್ಯಂತ ಸಂಪೂರ್ಣ ಲಾಕ್‌ಡೌನ್ ಆಗಿರುತ್ತದೆ ಎಂದು ದ.ಕ.ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಈ ಅವಧಿಯಲ್ಲಿ ಅಗತ್ಯ ವಸ್ತುಗಳಾದ ಪತ್ರಿಕೆ, ತರಕಾರಿ, ಮೀನು, ಮಾಂಸ, ಹಾಲು, ಔಷಧ ಪೂರೈಕೆ/ಖರೀದಿಗೆ ಯಾವುದೇ ನಿರ್ಬಂಧವಿರುವುದಿಲ್ಲ. ಆದರೆ ಇತರ ಎಲ್ಲಾ ಅಂಗಡಿ ಮುಂಗಟ್ಟುಗಳು, ಹೊಟೇಲ್‌ಗಳು ಮುಚ್ಚಲ್ಪಡಲಿದೆ. ಅಲ್ಲದೆ ಎಲ್ಲಾ ಖಾಸಗಿ ಹಾಗೂ ಸಾರ್ವಜನಿಕ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಅನುಮತಿ ಪಡೆದ ಮದುವೆಗೆ ಅವಕಾಶ: ಈಗಾಗಲೆ ನಿಗದಿಯಾಗಿರುವ ಮತ್ತು ಸ್ಥಳೀಯ ಸಂಸ್ಥೆಯಿಂದ ಅನುಮತಿ ಪಡೆದಿರುವ ಮೇ 24ರ ಮದುವೆ ಕಾರ್ಯಕ್ರಮಗಳನ್ನು ಸರಕಾರ ನೀಡಿರುವ ಮಾರ್ಗಸೂಚಿಯಂತೆ ನಡೆಸಬಹುದಾಗಿದೆ. ಮದುವೆಯ ಪ್ರಯುಕ್ತ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಪ್ರಯಾಣಿಸುವ ಆವಶ್ಯಕತೆ ಇದ್ದರೆ ಖಾಸಗಿ ವಾಹನಗಳಿಗೆ ಸ್ಥಳೀಯ ಸಂಸ್ಥೆಯಿಂದ ಅನುಮತಿ ಪಡೆಯಬೇಕು ಎಂದು ದ.ಕ.ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
Click this button or press Ctrl+G to toggle between Kannada and English