ಮಂಗಳೂರು: ವೆನ್ ಲಾಕ್ ಕೋವಿಡ್ ಆಸ್ಪತ್ರೆಯಿಂದ ಐವರು ಸೋಂಕಿತರು ಗುಣಮುಖರಾಗಿ ಇಂದು ಬಿಡುಗಡೆಯಾಗಿದ್ದಾರೆ. ಬಂಟ್ವಾಳದ ಮೂವರು ಮತ್ತು ಮಂಗಳೂರೂ ಬೊಳೂರಿನ ಇಬ್ಬರು ಸೋಂಕಿತ ಗುಣಮುಖರಾಗಿದ್ದು ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇಂದು ಮೂವರು ಬಂಟ್ವಾಳದ ಸೋಂಕಿತರು ಬಿಡುಗಡೆಯಾಗಿದ್ದಾರೆ. ಇವರಲ್ಲಿ ದೃಷ್ಟಿ ಕಳೆದುಕೊಂಡ ಹಿರಿಯರೊಬ್ಬರೂ ಇದ್ದಾರೆ. ಈ ಮೂಲಕ ಜಿಲ್ಲೆಯ ಅತೀ ದೊಡ್ಡ ಕೋವಿಡ್-19 ಹಾಟ್ ಸ್ಪಾಟ್ ಆಗಿದ್ದ ಬಂಟ್ವಾಳ ಈಗ ಸೋಂಕು ಮುಕ್ತವಾಗಿದೆ. ದ.ಕ ಜಿಲ್ಲಾಡಳಿತವು ಇಂದು ಡಿಸ್ಚಾರ್ಜ್ ಆದ ರೋಗಿಗಳನ್ನು ಬೀಳ್ಕೊಟ್ಟಿದೆ
ಸದ್ಯ ಮಂಗಳೂರು ಕೋವಿಡ್ ಆಸ್ಪತ್ರೆ ಯಲ್ಲಿ 31 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂರು ಮಂದಿ ರೋಗಿಗಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲ್ಲಾ ಕೋವಿಡ್-19 ಸೋಂಕಿತ ರೋಗಿಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೆನ್ಲಾಕ್ ಆಸ್ಪತ್ರೆ ಯ ಅಧೀಕ್ಷಕ ಡಾ.ಸದಾಶಿವ ಶಾನುಭೋಗ ಮಾಹಿತಿ ನೀಡಿದ್ದಾರೆ.
Click this button or press Ctrl+G to toggle between Kannada and English