ಉಡುಪಿ : ಉಡುಪಿ ಜಿಲ್ಲೆಯಲ್ಲಿ ಐವರಲ್ಲಿ ಶನಿವಾರ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. 4 ಮಂದಿ ಮಹಾರಾಷ್ಟ್ರದಿಂದ ಹಿಂತಿರುಗಿದವರಿಗೆ ಹಾಗೂ ದುಬೈನಿಂದ ಜಿಲ್ಲೆಗೆ ಬಂದ ಒಬ್ಬರಲ್ಲಿ ಸೋಂಕು ದೃಢಪಟ್ಟಿದೆ.
37, 57, 31 ವರ್ಷದ ಪುರುಷ ಹಾಗೂ 48, 34 ವರ್ಷದ ಮಹಿಳೆಯಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಇದೀಗ ಜಿಲ್ಲೆಯಲ್ಲಿ ಸೋಂಕಿಗೆ ಪೀಡಿತರಾದವರ ಸಂಖ್ಯೆ 55 ಕ್ಕೆ ಏರಿದೆ. ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾಗಿದ್ದು ಮೂವರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ ಹಾಗೂ 51 ಸಕ್ರಿಯ ಪ್ರಕರಣಗಳಿವೆ.
Click this button or press Ctrl+G to toggle between Kannada and English