- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಉಡುಪಿ ಜಿಲ್ಲೆಯಲ್ಲಿ ಐವರಲ್ಲಿ ಕೊರೊನಾ ಸೋಂಕು ಪತ್ತೆ

Udupi Covid [1]ಉಡುಪಿ : ಉಡುಪಿ ಜಿಲ್ಲೆಯಲ್ಲಿ ಐವರಲ್ಲಿ ಶನಿವಾರ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. 4 ಮಂದಿ ಮಹಾರಾಷ್ಟ್ರದಿಂದ ಹಿಂತಿರುಗಿದವರಿಗೆ ಹಾಗೂ ದುಬೈನಿಂದ ಜಿಲ್ಲೆಗೆ ಬಂದ ಒಬ್ಬರಲ್ಲಿ ಸೋಂಕು ದೃಢಪಟ್ಟಿದೆ.

37, 57, 31 ವರ್ಷದ ಪುರುಷ ಹಾಗೂ 48, 34 ವರ್ಷದ ಮಹಿಳೆಯಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಇದೀಗ ಜಿಲ್ಲೆಯಲ್ಲಿ ಸೋಂಕಿಗೆ ಪೀಡಿತರಾದವರ ಸಂಖ್ಯೆ 55 ಕ್ಕೆ ಏರಿದೆ. ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾಗಿದ್ದು ಮೂವರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ ಹಾಗೂ 51 ಸಕ್ರಿಯ ಪ್ರಕರಣಗಳಿವೆ.