ಕಾರ್ಕಳದಲ್ಲಿ ಎಎಸ್‌ಐ ಮತ್ತು ಪೇದೆಗೆ ಕೊರೊನಾ ದೃಢ, 80 ಸಿಬ್ಬಂದಿಗಳಿಗೆ ಕ್ವಾರಂಟೈನ್ ಸಿದ್ಧತೆ ‌

4:39 PM, Sunday, May 24th, 2020
Share
1 Star2 Stars3 Stars4 Stars5 Stars
(No Ratings Yet)
Loading...

Karkala Coronaಉಡುಪಿ  : ಚೆಕ್‌ಪೋಸ್ಟ್‌ ಹಾಗೂ ಕ್ವಾರಂಟೈನ್‌ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸಿದ ಅಜೆಕಾರು ಠಾಣೆಯ ಎಎಸ್‌ಐ ಹಾಗೂ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣಾ ಪೇದೆಗೆ ಕೊರೊನಾ ದೃಢಪಟ್ಟಿದೆ, ಇದರಿಂದಾಗಿ ಒಟ್ಟು 80 ಸಿಬ್ಬಂದಿಗಳನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತಿದೆ.

ಪೊಲೀಸರಿಬ್ಬರಿಗೆ ಕೊರೊನಾ ದೃಢಪಟ್ಟ ಹಿನ್ನಲೆ ಕಾರ್ಕಳ ನಗರ ಮತ್ತು ಗ್ರಾಮಾಂತರ ಪೊಲೀಸ್‌ ಠಾಣೆ, ಕಾರ್ಕಳ ಸರ್ಕಲ್‌ ಇನ್‌ಸ್ಪೆಕ್ಟರ್‌ ಕಚೇರಿ, ಅಜೆಕಾರು ಪೊಲೀಸ್‌ ಠಾಣೆಯನ್ನು ಸೀಲ್‌ಡೌನ್‌ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಕೊರೊನಾ ದೃಢಪಟ್ಟ ಇಬ್ಬರು ಪೊಲೀಸ್‌ ಸಿಬ್ಬಂದಿಗಳು ಚೆಕ್‌ಪೋಸ್ಟ್‌ ಹಾಗೂ ಕ್ವಾರಂಟೈನ್‌ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸಿದ್ದರು ಎಂದು ತಿಳಿದು ಬಂದಿದೆ. ಆದರೆ ಇಬ್ಬರಿಗೆ ಯಾರ ಸಂಪರ್ಕದಿಂದ ಸೋಂಕು ತಗುಲಿದೆ ಎಂದು ಇನ್ನಷ್ಟೇ ತಿಳಿದು ಬರಬೇಕಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English