ಕಾಸರಗೋಡು : ರವಿವಾರದಂದು ಕಾಸರಗೋಡು ಜಿಲ್ಲೆಯಲ್ಲಿ ಐವರಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಈ ನಡುವೆ ಇಬ್ಬರು ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಸೋಂಕು ಖಚಿತಗೊಂಡವರೆಲ್ಲ ಮಹಾರಾಷ್ಟ್ರ ದಿಂದ ಆಗಮಿಸಿದವರಾಗಿದ್ದಾರೆ. 41 ವರ್ಷ ಪ್ರಾಯದ ಕುಂಬಳೆ ನಿವಾಸಿ, 32 ವರ್ಷದ ಮಂಗಲ್ಪಾಡಿ ನಿವಾಸಿ, 44 ಮತ್ತು 47 ವರ್ಷ ಪ್ರಾಯದ ಪೈವಳಕೆ ನಿವಾಸಿಗಳು ಹಾಗೂ 60 ವರ್ಷದ ವರ್ಕಾಡಿ ಗ್ರಾಮದ ಕೆದಂಬಾಡಿ ನಿವಾಸಿಯಲ್ಲಿ ಸೋಂಕು ಇರುವುದು ಖಚಿತವಾಗಿದೆ. ರವಿವಾರ ಸೋಂಕು ದೃಢಪಟ್ಟವರೆಲ್ಲರೂ ಪುರುಷರಾಗಿದ್ದಾರೆ.
ಭಾನುವಾರ ಇಬ್ಬರು ಕೋವಿಡ್ ರೋಗದಿಂದ ಗುಣಮುಖರಾಗಿದ್ದಾರೆ. ಕಾಸರಗೋಡು ಜನರಲ್ ಆಸ್ಪತ್ರೆಯ ಆರೋಗ್ಯ ಕಾರ್ಯಕರ್ತೆ ಮತ್ತು ಕುಂಬಳೆ ನಿವಾಸಿ 41 ವರ್ಷದ ವ್ಯಕ್ತಿ ಗುಣಮುಖರಾಗಿದ್ದಾರೆ.. ಇವರಲ್ಲಿ ಕುಂಬಳೆ ನಿವಾಸಿ ಮಹಾರಾಷ್ಟ್ರದಿಂದ ಆಗಮಿಸಿದ್ದರು. ಸೋಂಕು ತಗುಲಿರುವುದು ಖಚಿತಗೊಂಡ ಹಿನ್ನೆಲೆಯಲ್ಲಿ ಉಕ್ಕಿನಡ್ಕ ಕಾಸರಗೋಡು ಮೆಡಿಕಲ್ ಕಾಲೇಜಿನಲ್ಲಿ ದಾಖಲಾಗಿದ್ದರು.
Click this button or press Ctrl+G to toggle between Kannada and English