ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಮತ್ತೆ ಮೂರು ಹೊಸ ಕೋವಿಡ್ ಪ್ರಕರಣಗಳು ಪತ್ತೆ

6:23 PM, Monday, May 25th, 2020
Share
1 Star2 Stars3 Stars4 Stars5 Stars
(No Ratings Yet)
Loading...

mangaluru-corona

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಮತ್ತೆ ಮೂರು ಕೋವಿಡ್-19 ಹೊಸ ಪ್ರಕರಣಗಳು ವರದಿಯಾಗಿದೆ. ಇದಿರಿಂದ ಜಿಲ್ಲೆಯ ಒಟ್ಟು ಕೋವಿಡ್-19 ಸೋಂಕಿತರ ಸಂಖ್ಯೆ 69ಕ್ಕೆ ಏರಿಕೆಯಾಗಿದೆ.

ಈ ಮೂವರು ಸೋಂಕಿತರು ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ. 30, 25, 55 ವರ್ಷದ ಮೂವರು ಪುರುಷರಿಗೆ ಕೋವಿಡ್ -19 ಸೋಂಕು ತಾಗಿರುವುದು ದೃಢವಾಗಿದೆ.

ಈ ಮೂವರು ಮಹಾರಾಷ್ಟ್ರದ ಮುಂಬಯಿ ಮತ್ತು ಪೂನಾದಿಂದ ಬಂದಿದ್ದರು. ಇವರನ್ನು ಬೆಳ್ತಂಗಡಿಯಲ್ಲಿ ಕ್ವಾರೆಂಟೈನ್ ಮಾಡಲಾಗಿತ್ತು. ಸದ್ಯ ಇವರಿಗೆ ಮಂಗಳೂರಿನ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮಾಡಲಾಗುತ್ತಿದೆ.

ರಾಜ್ಯದಲ್ಲಿ ಇಂದು 69 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 2158ಕ್ಕೆ ಏರಿಕೆಯಾಗಿದೆ. ಇದರಲ್ಲಿ 680 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು 53 ಜನ ಸೋಂಕಿನ ಕಾರಣದಿಂದ ಸಾವನ್ನಪ್ಪಿದರೆ, ಇಬ್ಬರು ಸೋಂಕಿತರು ಕೋವಿಡ್ ಅಲ್ಲದ ಕಾರಣದಿಂದ ಮರಣ ಹೊಂದಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English