ಧಾರವಾಡ: ಮಹಾರಾಷ್ಟ್ರದಿಂದ ಅಗಮಿಸಿದ್ದವರೊಂದಿಗೆ ಸಂಪರ್ಕ ಹೊಂದಿದ್ದ ನಾಲ್ವರಿಗೆ ಕೊರೋನಾ ಸೋಂಕು ತಗುಲುವುದರೊಂದಿಗೆ ಜಿಲ್ಲೆಯಲ್ಲಿ
ಸೋಂಕಿತರ ಸಂಖ್ಯೆ 50ರ ಗಡಿಯ ಸಮೀಪಕ್ಕೆ ಬಂದು ನಿಂತಿರುವುದು ಜಿಲ್ಲೆಯ ಜನತೆಯಲ್ಲಿ ಆತಂಕ ಮೂಡಿಸಿದೆ.
ಸೋಂಕು ತಗಲಿರುವವರಲ್ಲಿ ಮುದ್ದು ಮಗುವೊಂದು ಕೂಡ ಇದೆ. ಇದರೊಂದಿಗೆ ಒಂದೇ ಕುಟುಂಬದ ಮೂವರಿಗೆ ಸೋಂಕು ದೃಢಪಟ್ಟಿದೆ.
ಮಹಾರಾಷ್ಟ್ರದಿಂದ ಬಂದಿರುವ ಇವರಲ್ಲಿ 33 ವರ್ಷದ ಮಹಿಳೆ, 17 ವರ್ಷದ ಯುವಕ ಮತ್ತು 2 ವರ್ಷ 5 ತಿಂಗಳಿನ ಮಗುವೊಂದು ಇದೆ. ಇವರು
ಈ ಹಿಂದೆ ಕೊರೋನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದವರೊಂದಿಗೆ ಸಂಪರ್ಕ ಹೊಂದಿದ್ದರು. ಇವರ ಗಂಟಲ ದ್ರವದ ಮಾದರಿ ಸಂಗ್ರಹಿಸಿ
ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಲಾಗಿತ್ತು. ಮೆ.25ರಂದು ಅವರ ಪರೀಕ್ಷಾ ವರದಿ ಬಂದಿದ್ದು ಇವರಿಗೆ ಕೊರೋನಾ ಇರುವುದು ದೃಢಪಟ್ಟಿದೆ.
ಇವರನ್ನು ಈಗಾಗಲೇ ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು. ಇನ್ನೊಬ್ಬ ಮಹಾರಾಷ್ಟ್ರದಿಂದ ಆಗಮಿಸಿದ್ದವನಿಗೂ ಸೋಂಕು ತಗುಲಿದೆ.
ಇವರೆಲ್ಲರನ್ನೂ ಕಿಮ್ಸ್ ಆಸ್ಪತ್ರೆಯ ಕೊರೋನಾ ಚಿಕಿತ್ಸಾ ಕೇಂದ್ರದಲ್ಲಿ ದಾಖಲಿಸಲಾಗಿದೆ.
ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 43 ಕ್ಕೇರಿದೆ. ಕೆಂಪು ವಲಯದ ರಾಜ್ಯದಿಂದ ಜಿಲ್ಲೆಗೆ ಬರುತ್ತಿರುವ ಜನರಿಂದಲೇ ಸೋಂಕಿತರ
ಸಂಖ್ಯೆ ಏರುತ್ತಿದೆ. ಸೋಂಕಿತರಲ್ಲಿ ಹೆಚ್ಚಿನವರು ಮಹಾರಾಷ್ಟದಿಂದ ಬಂದವರು ಅಥವಾ ಅವರೊಂದಿಗೆ ಸಂಪರ್ಕ ಹೊಂದಿರುವವರೇ ಆಗಿದ್ದಾರೆ.
ಸೋಂಕಿತರಲ್ಲಿ 10 ಜನ ಗುಣಮುಖರಾಗಿ ಆಸ್ಪತ್ರೆಯಿಂದ ತೆರಳಿದ್ದಾರೆ.
ಜಿಲ್ಲೆಯಲ್ಲಿ ಎರಡು ಗಂಟಲು ದ್ರವ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಯಾರು ಬೇಕಾದರೂ ಅಥವಾ ಸಂಶಯ ಬಂದವರೂ ಕೂಡ ಗಂಟಲು
ದ್ರವ ಪರೀಕ್ಷೆ ಮಾಡಿಸಿಕೊಳ್ಳಬಹುದು. ಆದರೆ ಪರೀಕ್ಷೆಗೆ ಸಮಯ ಹೆಚ್ಚು ಬೇಕಾಗುತ್ತದೆ. ನಮ್ಮ ಆರೋಗ್ಯ ತಜ್ಞರು ನಿರಂತರ ಕಾರ್ಯ
ನಿರ್ವಹಿಸುತ್ತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ವರದಿ: ಶಂಭು
ಮೆಗಾಮೀಡಿಯಾ ನ್ಯೂಸ್, ಹುಬ್ಬಳ್ಳಿ ಬ್ಯೂರೋ
Click this button or press Ctrl+G to toggle between Kannada and English