ಮಂಗಳೂರು : ಕತಾರ್‌ನಿಂದ ಬೆಂಗಳೂರಿಗೆ ಬಂದ ವಿಮಾನದಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮೂವರಿಗೆ ಕೊರೊನಾ ಪಾಸಿಟಿವ್ ಆಗಿದ್ದು ಅವರು ಬೆಂಗಳೂರಿನಲ್ಲಿಯೇ ಇರುವ ಕಾರಣದಿಂದಾಗಿ ಅವರನ್ನು ಅಲ್ಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ದ.ಕ. ಜಿಲ್ಲೆಯವರಾದ ಮೂವರು ಕತಾರ್‌ನಿಂದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಬೆಂಗಳೂರಿಗೆ ಬಂದ ಬಳಿಕ ಅವರನ್ನು ಅಲ್ಲೇ ಕ್ವಾರಂಟೈನ್‌ಗೆ ಒಳಪಡಿಸಲಾಗಿದ್ದು ಕೊರೊನಾ ಪರೀಕ್ಷೆ ನಡೆಸಿದಾಗ ಕೊರೊನಾ ಇರುವುದು ದೃಢಪಟ್ಟಿದೆ.
ಮೇ 25 ರ ಸಂಜೆ 5 ರಿಂದ ಮೇ 26 ರ ಮಧ್ಯಾಹ್ನ 12 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ಹೊಸ ಕೊರೊನಾ ಪ್ರಕರಣಗಳು ವರದಿಯಾಗಿಲ್ಲ.
ದಕ್ಷಿಣ ಕನ್ನಡದಲ್ಲಿ ಈವರೆಗೆ ಒಟ್ಟು 42,078 ಜನರನ್ನು ಪರೀಕ್ಷಿಸಲಾಗಿದೆ. ಎನ್‌ಐಟಿ-ಕೆ ಸುರತ್ಕಲ್ ಕ್ಯಾರೆಂಟೈನ್ ಕೇಂದ್ರದಲ್ಲಿ ಪ್ರಸ್ತುತ 47 ಜನರನ್ನು ಇಡಲಾಗಿದೆ. ಇನ್ನೂ 24 ಮಂದಿಯನ್ನು ಇಎಸ್ಐ ಆಸ್ಪತ್ರೆಯಲ್ಲಿ ಕ್ಯಾರೆಂಟೈನ್ ಕೇಂದ್ರದಲ್ಲಿ ಇಡಲಾಗಿದೆ.
ರಾಜ್ಯದಲ್ಲಿ ಇಂದು 100 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 2282ಕ್ಕೆ ಏರಿಕೆಯಾಗಿದೆ. ಇದರಲ್ಲಿ 722 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು 53 ಜನ ಸೋಂಕಿನ ಕಾರಣದಿಂದ ಸಾವನ್ನಪ್ಪಿದರೆ, ಇಬ್ಬರು ಸೋಂಕಿತರು ಕೋವಿಡ್ ಅಲ್ಲದ ಕಾರಣದಿಂದ ಮರಣ ಹೊಂದಿದ್ದಾರೆ.
Click this button or press Ctrl+G to toggle between Kannada and English