ಸೋಮವಾರಪೇಟೆಗೆ ತೆರಳುತ್ತಿದ್ದ ಕನ್ನಡದ ರಿಯಾಲಿಟಿ ಶೋ ಹುಡುಗಿ ಅಪಘಾತದಲ್ಲಿ ಮೃತ್ಯು

12:34 PM, Wednesday, May 27th, 2020
Share
1 Star2 Stars3 Stars4 Stars5 Stars
(No Ratings Yet)
Loading...

Mebina-Michael ಮಂಡ್ಯ: ಕನ್ನಡದ ರಿಯಾಲಿಟಿ ಶೋ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್’ ಸೀಸನ್ 4 ವಿಜೇತೆ ಮೆಬಿನಾ ಮೈಕಲ್, ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಿಹಳ್ಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಭವಿಸಿದ  ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಿಹಳ್ಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಿನ್ನೆ ಸಂಜೆ 4.30ರ ವೇಳೆಗೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. ಗಾಯಾಳುಗಳಿಗೆ ಆದಿಚುಂಚನಗಿರಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಈ ವೇಳೆ ಮಾರ್ಗ ಮಧ್ಯೆ ಮೆಬಿನಾ ಸಾವನ್ನಪ್ಪಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ ಬೆಂಗಳೂರಿನಿಂದ ಸೋಮವಾರಪೇಟೆಯ ಸ್ವಗ್ರಾಮ ಐಗೂರರಿಗೆ ಕೆಎ 02 ಎಎಫ್ 4796 ಸಂಖ್ಯೆಯ ಕಾರು ತೆರಳುತ್ತಿತ್ತು. ಹಾಸನ ಕಡೆಯಿಂದ ಯೂಟರ್ನ್ ಆಗುತ್ತಿದ್ದ ಟ್ರ್ಯಾಕ್ಟರಿಗೆ ಕಾರು ಡಿಕ್ಕಿಯಾಗಿದ್ದು, ಈ ವೇಳೆ. ಕಾರಿನಲ್ಲಿದ್ದವರನ್ನು ರಿಯಾಲಿಟಿ ಶೋ ಕಾರ್ಯಕ್ರಮದ ತಂಡದವರು ಎನ್ನಲಾಗಿದೆ. ಮೇಬಿನಾ ಸೇರಿದಂತೆ ಮೂವರು ಕೊಡಗಿನ ಸೋಮವಾರಪೇಟೆಗೆ ತೆರಳುತ್ತಿದ್ದರು ಎಂಬ ಮಾಹಿತಿ ಲಭಿಸಿದೆ. ಬೆಳ್ಳೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪ್ಯಾಟೆ ಹುಡ್ಗೀರು ಹಳ್ಳಿ ಲೈಫು ರಿಯಾಲಿಟಿ ಶೋ 4ರ ವಿನ್ನರ್ ಆಗಿ ಮೆಬಿನಾ ಹೊರ ಹೊಮ್ಮಿದ್ದರು. ರಿಯಾಲಿಟಿ ಶೋ ವಿನ್ನರ್ ಆಗಿ 7 ಲಕ್ಷ ರೂ. ಬಹುಮಾನ ಪಡೆದಿದ್ದರು.

Mebina-Michael

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English