ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಸಂಜೆಯ ಆರೋಗ್ಯ ಇಲಾಖೆ ಯ ವರದಿಯಲ್ಲಿ ಮತ್ತೆ 18 ಜನರಿಗೆ ಕೋವಿಡ್-19 ಸೋಂಕು ತಗಲಿರುವುದು ದೃಢವಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಒಟ್ಟು 24 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದೆ.
ಜಿಲ್ಲೆಯ ಈಗಿನ 18 ಸೇರಿದಂತೆ ಇಂದಿನ ಎಲ್ಲಾ 24 ಮಂದಿ ಸೋಂಕಿತರು ಮಹಾರಾಷ್ಟ್ರ ರಾಜ್ಯದಿಂದ ಬಂದು ಜಿಲ್ಲೆಯಲ್ಲಿ ಕ್ವಾರಂಟೈನ್ ನಲ್ಲಿ ಇರುವವರು ಆಗಿದ್ದಾರೆ. ಇವರಿಗೆ ನಿಗಧಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಶತಕದ ಅಂಚಿಗೆ ತಲುಪಿದೆ. ಜಿಲ್ಲೆಯಲ್ಲಿ ಒಟ್ಟು 97 ಸೋಂಕು ಪ್ರಕರಣಗಳು ದೃಢವಾಗಿದೆ.
ಜಿಲ್ಲೆಯ 97 ಪ್ರಕರಣಗಳ ಪೈಕಿ 37 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಅದರಲ್ಲೂ 12 ಮಂದಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 63 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರು ಮಂದಿ ಸಾವನ್ನಪ್ಪಿದ್ದಾರೆ. ಓರ್ವ ಸೋಂಕಿತ ಸೋಂಕು ಅಲ್ಲದ ಕಾರಣದಿಂದ ಮರಣ ಹೊಂದಿದ್ದಾರೆ.
Click this button or press Ctrl+G to toggle between Kannada and English