ಹುಬ್ಬಳ್ಳಿ : ಉತ್ತರ ಕರ್ನಾಟಕ ಮತ್ತು ಮಹಾರಾಷ್ಟ್ರದ ಭಕ್ತರ ಆರಾಧ್ಯ ದೇವಿ ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ದೇವಸ್ಥಾನವನ್ನು ಸದ್ಯ ಕೊರೋನಾ ಹಿನ್ನೆಲೆಯಲ್ಲಿ ಲಾಕ್ ಡೌನ್ ಅವಧಿಯಿಂದ ಬಂದ್ ಮಾಡಲಾಗಿದೆ.
ರಾಜ್ಯ ಮುಜರಾಯಿ ಇಲಾಖೆಯ ಸುಪರ್ದಿಯಲ್ಲಿರುವ ದೇವಸ್ಥಾನದಲ್ಲಿ ದೇವಿಗೆ ಅರ್ಚಕರಿಂದ ನಿತ್ಯ ಪೂಜೆ ನಡೆಯುತ್ತಲಿದೆ. ಆದರೆ, ಸಾರ್ವಜನಿಕರಿಗೆ ಮಾತ್ರ ಇನ್ನೂ ಪ್ರವೇಶ ನೀಡುತ್ತಿಲ್ಲ. ಈ ಕುರಿತು ಮಾಹಿತಿ ನೀಡಿರುವ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ರವಿ ಕೋಟಾರಗಸ್ತಿ ಜೂ. 15 ರವರೆಗೆ ದೇವಸ್ಥಾನವನ್ನು ಬಂದ್ ಇಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಮೇ.30 ರಂದು ರಾಜ್ಯ ಸರಕಾರವು ಜೂನ್. 8 ರಿಂದ ದೇವಸ್ಥಾನಗಳನ್ನು ಸೂಕ್ತ ಕೊರೋನಾ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ತೆಗೆಯಬಹುದು ಎಂದು ತಿಳಿಸಿದ್ದರೂ, ಭಕ್ತರ ಸಂಖ್ಯೆ ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಮುನ್ನೆಚ್ಚರಿಕೆ ಕ್ರಮವಾಗಿ ದೇವಸ್ಥಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಿಲ್ಲ. ಸರಕಾರದ ಮಾರ್ಗಸೂಚಿಯ ಪ್ರಕಾರ ದೇವಸ್ಥಾನಗಳಲ್ಲಿ ದಿನನಿತ್ಯದ ಪೂಜಾ ಕೈಂಕರ್ಯಗಳು ನಡೆಯುತ್ತಿವೆ ಎಂದು ಕೋಟಾರಗಸ್ತಿ ತಿಳಿಸಿದ್ದಾರೆ.
ವರದಿ : ಶಂಭು
ಮೆಗಾಮೀಡಿಯಾ ನ್ಯೂಸ್, ಹುಬ್ಬಳ್ಳಿ ಬ್ಯೂರೋ
Click this button or press Ctrl+G to toggle between Kannada and English