ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 137ಕ್ಕೆ ಏರಿಕೆಯಾಗಿದೆ. ಸೋಮವಾರ ನಾಲ್ಕು ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
ನಾಲ್ಕು ಸೋಂಕು ಪ್ರಕರಣಗಳ ಪೈಕಿ ಓರ್ವ ಗುಜರಾತ್ ನಿಂದ ಬಂದವರಾಗಿದ್ದು ಮತ್ತೊಬ್ಬರು ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾದವರು. ಉಳಿದ ಇಬ್ಬರ ಸೋಂಕು ಮೂಲದ ಸಂಪರ್ಕ ಪತ್ತೆಹಚ್ಚಲಾಗುತ್ತಿದೆ.
45 ವರ್ಷದ ಮಹಿಳೆ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. 50 ವರ್ಷದ ಪುರುಷ ಗುಜರಾತ್ ರಾಜ್ಯದಿಂದ ಬಂದವರಾಗಿದ್ದಾರೆ. 24 ವರ್ಷದ ಯುವತಿ ಮತ್ತು 27 ವರ್ಷದ ಯುವಕನ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ.
ರಾಜ್ಯದಲ್ಲಿ ಇಂದು ಹೊಸ 187 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 3408ಕ್ಕೆ ಏರಿಕೆಯಾಗಿದೆ, ಇವರಲ್ಲಿ 1328 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 52 ಮಂದಿ ಸೋಂಕಿನ ಕಾರಣದಿಂದ ಮರಣ ಹೊಂದಿದ್ದು, ಇಬ್ಬರು ಕೋವಿಡ್ ಅಲ್ಲದ ಅನ್ಯ ಕಾರಣದಿಂದ ಸಾವನ್ನಪ್ಪಿದ್ದಾರೆ.
Click this button or press Ctrl+G to toggle between Kannada and English