ವಿದ್ಯುತ್ ಶಾಕ್ ನಿಂದ ಎ.ಸಿ ಮೆಕ್ಯಾನಿಕ್ ಸಾವು

12:00 AM, Tuesday, June 2nd, 2020
Share
1 Star2 Stars3 Stars4 Stars5 Stars
(No Ratings Yet)
Loading...

sirajಉಜಿರೆ : ಎ.ಸಿ ಮೆಕ್ಯಾನಿಕ್ ಒಬ್ಬರು ದುರಸ್ತಿ ಕಾರ್ಯದಲ್ಲಿ ನಿರತರಾಗಿದ್ದ ವೇಳೆ ವಿದ್ಯುತ್ ಆಘಾತದಿಂದಾಗಿ ಸಾವನ್ನಪ್ಪಿರುವ ಘಟನೆ ಇಲ್ಲಿನ ಅತ್ತಾಜೆ ಎಂಬಲ್ಲಿ ನಡೆದಿದೆ.

ಅತ್ತಾಜೆ ನಿವಾಸಿ ಉಜಿರೆಯಲ್ಲಿ ಎ.ಸಿ ಮೆಕ್ಯಾನಿಕ್ ಮಳಿಗೆ ನಡೆಸುತ್ತಿದ್ದ ಮುಹಮ್ಮದ್ ಸಿರಾಜ್ ಮೃತಪಟ್ಟ ಯುವಕ.

ಕಕ್ಕಿಂಜೆಯ ಸಂಬಂಧಿಕರ ಮನೆಯಲ್ಲಿ ದುರಸ್ತಿ ಕಾರ್ಯದಲ್ಲಿ ನಿರತರಾಗಿದ್ದ ವೇಳೆ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸುವ ಪ್ರಯತ್ನ ನಡೆಸಲಾಯಿತಾದರೂ ಅದಾಗಲೇ ಅವರು ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮೃತದೇಹ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English