ಮಡಿಕೇರಿ : 5 ವರ್ಷದ ಮಗುವಿನ ಮೇಲೆ 14 ವರ್ಷದ ಬಾಲಕನಿಂದ ಅತ್ಯಾಚಾರ

8:34 PM, Wednesday, June 3rd, 2020
Share
1 Star2 Stars3 Stars4 Stars5 Stars
(No Ratings Yet)
Loading...

 minor-girlಮಡಿಕೇರಿ : ನೆರೆಮನೆಯ 14 ವರ್ಷದ  ಬಾಲಕ  5 ವರ್ಷದ ಮಗುವಿನ ಮೇಲೆ ಅತ್ಯಾಚಾರ ಮಾಡಿರುವಂತಹ ಆಘಾತಕಾರಿ ಘಟನೆ ಮಡಿಕೇರಿಯ ಹೊರವಲಯದ ಗ್ರಾಮವೊಂದರಲ್ಲಿ ನಡೆದಿದೆ.

ನೋವಿನಿಂದ ಬಳಲುತ್ತಿದ್ದ ಮಗುವನ್ನು ಆರೋಗ್ಯ ತಪಾಸಣೆ ನಡೆಸಿದಾಗ ಕೃತ್ಯ ಬಯಲಿಗೆ ಬಂದಿದೆ. ಬಾಲಕನನ್ನು ವಶಕ್ಕೆ ಪಡೆದಿದ್ದು, ಬಾಲಮಂದಿರಕ್ಕೆ ರವಾನೆ ಮಾಡಲಾಗಿದೆ. ಮಗುವಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಮಡಿಕೇರಿಯಲ್ಲಿ  ನಡೆದಿರುವ  ಘಟನೆ ಜನರನ್ನು ಬೆಚ್ಚಿಬೀಳಿಸಿದೆ. ಸಣ್ಣ ಮಗುವಿನ ಮೇಲೆ ಅಪ್ರಾಪ್ತ ಬಾಲಕ ಅತ್ಯಾಚಾರ ನಡೆಸಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಮಡಿಕೇರಿ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚೆಗಷ್ಟೇ ವಿಜಯಪುರದಲ್ಲಿಯೂ ಬಾಲಕಿಯ ಮೇಲೆ ವಿವಾಹಿತನೊಬ್ಬ ನಿರಂತರ ಅತ್ಯಾಚಾರ ನಡೆಸಿ ಬಾಲಕಿ ಗರ್ಭಿಣಿಯಾದ ಘಟನೆ ನಡೆದಿತ್ತು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English