ಮಂಗಳೂರು : ಮಸೀದಿಗಳನ್ನು ಜೂ. 8ರಿಂದ ತೆರೆಯಲು ಸರಕಾರ ಅವಕಾಶ ಮಾಡಿಕೊಟ್ಟರೂ ಮುಂದೆ ಮಸೀದಿಗೆ ಸಂಬಂಧಿಸಿದ ನಿರ್ದಿಷ್ಟ ಮಾರ್ಗಸೂಚಿಗ ಳನ್ನು ಪ್ರಕಟಿಸಿದ ಬಳಿಕವೇ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ.
ದ.ಕ. ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಅಲ್‌ಹಾಜ್ ಕೆ.ಎಸ್. ಮುಹಮದ್ ಮಸೂದ್ ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಜಿಲ್ಲಾಧ್ಯಕ್ಷ ಯಾಸೀನ್ ಮಲ್ಪೆ ಅವರು ಈ ವಿಚಾರವನ್ನು ತಿಳಿಸಿದ್ದಾರೆ.
ಆದರೆ ಮಂಗಳೂರು ಬಂದರ್‌ನ ಝೀನತ್ ಭಕ್ಷ್ ಕೇಂದ್ರ ಜುಮ್ಮಾ ಮಸೀದಿಯ ಜಮಾಅತ್ ಖಾನಾದಲ್ಲಿ ಜೂ. 8ರಿಂದ ನಮಾಝ್ ಪ್ರಾಯೋಗಿಕವಾಗಿ ನಡೆಯಲಿದೆ ಎಂದು ಆಡಳಿತ ಸಮಿತಿ ಅಧ್ಯಕ್ಷ ಅಲ್‌ಹಾಜ್ ವೈ. ಅಬ್ದುಲ್ಲ ಕುಂಞಿ ಅವರು ತಿಳಿಸಿದ್ದಾರೆ.
Click this button or press Ctrl+G to toggle between Kannada and English