- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಭಾನುವಾರ ಕೋವಿಡ್-19 ಸೋಂಕಿತರ ಸಂಖ್ಯೆ : ದಕ್ಷಿಣ ಕನ್ನಡ – 17, ಉಡುಪಿ-13

corona-virus [1]ಮಂಗಳೂರು: ರಾಜ್ಯ ಆರೋಗ್ಯ ಬುಲೆಟಿನ್ ಮಾಹಿತಿ ಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 17 ಹೊಸ ಕೋವಿಡ್-19 ಸೋಂಕು ಪ್ರಕರಣಗಳು ದೃಢಪಟ್ಟಿದೆ. ಇದರಿಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 192ಕ್ಕೆ ಏರಿಕೆಯಾಗಿದೆ.

ಇಂದು ದೃಢಪಟ್ಟ 17 ಮಂದಿ ಸೋಂಕಿತರಲ್ಲಿ 16 ಮಂದಿ ಮಹಾರಾಷ್ಟ್ರದಿಂದ ಜಿಲ್ಲೆಗೆ ಬಂದವರಾಗಿದ್ದು ಒಬ್ಬರು ಗೋವಾದಿಂದ ಬಂದವರಾಗಿದ್ದಾರೆ.

ಇಂದಿನ ಸೋಂಕಿತರಲ್ಲಿ 15 ಮಂದಿ ಪುರುಷರು ಮತ್ತು ಇಬ್ಬರು ಮಹಿಳೆಯರಾಗಿದ್ದಾರೆ. ಇವರೆಲ್ಲರಿಗೂ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ ಒಟ್ಟು 192 ಜನರಿಗೆ ಸೋಂಕು ಧೃಢವಾಗಿದ್ದು, 94 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಡುಪಿ:  ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆಗೆ ಇಂದುಸ್ವಲ್ಪ ಮಟ್ಟಿಗೆ ಇಳಿಮುಖವಾಗಿದೆ. ಭಾನುವಾರ  ಮತ್ತೆ 13 ಹೊಸ ಸೋಂಕು ಪ್ರಕರಣಗಳು ಜಿಲ್ಲೆಯಲ್ಲಿ ದೃಢವಾಗಿದೆ.

ಕಳೆದೆರಡು ವಾರಗಳ ಕೋವಿಡ್ ಸೋಂಕಿತರ ಪಟ್ಟಿ ಗಮಿನಿಸಿದಲ್ಲಿ ಇಂದು ಜಿಲ್ಲೆಯ ಜನತೆಗೆ ಸ್ವಲ್ಪ ಮಟ್ಟಿನ ಸಮಾಧಾನ ತಂದಿದೆ. ದಿನವೂ 50ಕ್ಕಿಂತ ಮೇಲಿದ್ದ ಸೋಂಕಿತರ ಸಂಖ್ಯೆ ಇಂದು ಇಳಿಮುಖವಾಗಿದ್ದು ಸಮಾಧಾನಕರವಾಗಿದೆ

ಕಳೆದೆರಡು ವಾರಗಳಲ್ಲಿ ಜಿಲ್ಲೆಯ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಮಹಾರಾಷ್ಟ್ರ ಸೇರಿದಂತೆ ಅನ್ಯರಾಜ್ಯಗಳಿಂದ ಜಿಲ್ಲೆಗೆ ಆಗಮಿಸಿದ್ದ ಜನರ ಗಂಟಲು ದ್ರವ ಪರೀಕ್ಷೆಯ ವರದಿ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದು, ಸೋಂಕಿತರ ಸಂಖ್ಯೆ ಏರಿಕೆ ಕಾಣಲು ಕಾರಣವಾಗುತ್ತಿದೆ.

ಭಾನುವಾರ  13 ಮಂದಿ ಸೋಂಕಿತರಲ್ಲಿ 12 ಮಂದಿ ಮಹಾರಾಷ್ಟ್ರದಿಂದ ಬಂದವರಾಗಿದ್ದು, ಓರ್ವನ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ.

ರಾಜ್ಯದಲ್ಲಿಂದು 239 ಜನರಿಗೆ ಕೋವಿಡ್-19 ಸೋಂಕು ಕಾಣಿಸಿಕೊಂಡಿದ್ದು, ಒಟ್ಟು ಸೋಂಕಿತರ ಸಂಖ್ಯೆ 5452ಕ್ಕೆ ಏರಿಕೆಯಾಗಿದೆ. ಇಂದು 143 ಜನರು ಗುಣಮುಖರಾಗಿದ್ದು, ಒಟ್ಟು 2132 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದು ಇಬ್ಬರು ಸೋಂಕಿನ ಕಾರಣದಿಂದ ಮರಣ ಹೊಂದಿದ್ದು, ರಾಜ್ಯದಲ್ಲಿ ಇದುವರೆಗೆ 61 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಬ್ಬರು ಕೋವಿಡ್ ಅಲ್ಲದ ಕಾರಣದಿಂದ ಸಾವನ್ನಪ್ಪಿದ್ದಾರೆ