ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 9, ಮಂಗಳವಾರ 23 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 218ಕ್ಕೆ ಏರಿಕೆಯಾಗಿದೆ
ಸೋಂಕಿತರ ಪೈಕಿ ಪೈಕಿ ಇಬ್ಬರು ಮಹಾರಾಷ್ಟ್ರದಿಂದ ಮರಳಿದವರಾಗಿದ್ದಾರೆ. ಮೂವರು ದುಬೈನಿಂದ ಮರಳಿದವರಾಗಿದ್ದಾರೆ. ಉಳಿದ 18 ಮಂದಿ ಸೌದಿಯಿಂದ ಮರಳಿದವರಾಗಿದ್ದಾರೆ. ಈ ಎಲ್ಲಾ 23 ಮಂದಿಯನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳವಾರ 96 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 115 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಜೂನ್ 9ರಂದು ಕೊರೊನಾ ವೈರಸ್ ನ ಹೊಸ ಪ್ರಕರಣಗಳು ವರದಿಯಾಗಿಲ್ಲ
Click this button or press Ctrl+G to toggle between Kannada and English