ಬಂಟ್ವಾಳ: ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ( ಕಿಯೋನಿಕ್ಸ್) ಇದರ ಅಧ್ಯರಾಗಿ ಬಿಲ್ಲವ ಮುಖಂಡ ಹರಿಕೃಷ್ಣ ಬಂಟ್ವಾಳ ಅವರನ್ನು ನೇಮಿಸಿ ರಾಜ್ಯ ಸರಕಾರ ಆದೇಶ ನೀಡಿದೆ.
ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಧೀನ ಕಾರ್ಯದರ್ಶಿ ಸಿದ್ರಾಮಪ್ಪ ತಳವಾರ ಅವರು ಸರ್ಕಾರದ ಪರವಾಗಿ ಅಧಿಸೂಚನೆಯನ್ನು ಹೊರಡಿಸಿದ್ದು, ಜೂನ್ 12ರಿಂದಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಕೆ.ಹರಿಕೃಷ್ಣ ಬಂಟ್ವಾಳ್ ಅವರು ಕಳೆದ ಚುನಾವಣೆ ವೇಳೆ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಬಂಟ್ವಾಳ ಕ್ಷೇತ್ರದಲ್ಲಿ ವಿಜಯಿಯಾಗುವಲ್ಲಿ ಮಹತ್ತರ ಪಾತ್ರ ವಹಿಸಿದ್ದರು. ಬಳಿಕ ಬಿಜೆಪಿಯಲ್ಲಿ ಜಿಲ್ಲಾ ಮಟ್ಟದ ಹುದ್ದೆಗಳನ್ನು ಅಲಂಕರಿಸಿದ ಬಂಟ್ವಾಳ್, ಪ್ರಖರ ಭಾಷಣಗಳಿಗೆ ಹೆಸರುವಾಸಿ. ಬಿಲ್ಲವ ಸಮಾಜ ಸಂಘಟನೆಯಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ಬಂಟ್ವಾಳ್ ಅವರಿಗೆ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕೊಡಮಾಡುವ ನಿಗಮ ಹುದ್ದೆ ದೊರಕಿದೆ.
ಜಿಲ್ಲಾ ಬಿಜೆಪಿ ವಕ್ತಾರರಾಗಿ ಕಾರ್ಯನಿರ್ವಹಿಸಿದ್ದು, ಪ್ರಸ್ತುತ ಜಿಲ್ಲಾ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ವಿಧಾನಪರಿಷತ್ ಚುನಾವಣೆ ಸಂದರ್ಭದಲ್ಲಿಕಾಂಗ್ರೆಸ್ ಪಕ್ಷ ದಲ್ಲಿ ಟಿಕೆಟ್ ವಂಚಿತರಾಗಿದ್ದರು. ಆದ್ದರಿಂದ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ನಂತರ ಅವರು ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರಿದರು.
Click this button or press Ctrl+G to toggle between Kannada and English