ಮಂಗಳೂರು: ರಾಷ್ಟ್ರೀಯ ಹೆದ್ದಾರಿ 169ರ ಗುರುಪುರ ಪಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ನೂತನ ಸೇತುವೆಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ಜೂ. 12 ರ ಶುಕ್ರವಾರ ಉದ್ಘಾಟಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮತ್ತು ಮಂಗಳೂರು ಉತ್ತರ ಶಾಸಕ ಡಾ.ಭಾರತ್ ವೈ ಶೆಟ್ಟಿ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿ “175 ಮೀಟರ್ ಗುರುಪುರ ಸೇತುವೆಯನ್ನು ಪೂರ್ಣಗೊಳಿಸಲು ಟೆಂಡರ್ ಪ್ರಕಾರ ಎರಡು ವರ್ಷಗಳ ಗಡುವು ನೀಡಲಾಗಿದ್ದರೂ 16 ತಿಂಗಳಲ್ಲಿ ಪೂರ್ಣಗೊಂಡಿದೆ ಎಂದರು.
ಸಂಸದ ನಳಿನ್ ಕುಮಾರ್ ಕಟೀಲ್ ಅವರು, “ಗುರುಪುರ ಸೇತುವೆ ನಿರ್ಮಾಣದ ಸಮಯವೇ ಒಂದು ದಾಖಲೆಯಾಗಿದೆ ಮುಲರಪಟ್ನಾ ಸೇತುವೆ ಧಿಡೀರ್ ಕುಸಿತ ಕಂಡಾಗ , ಹಳೆಯ ಗುರುಪುರ ಸೇತುವೆಯ ಬಗ್ಗೆ ಎಚ್ಚರಿಕೆ ವಹಿಸಿ ಹೊಸ ಸೇತುವೆ ನಿರ್ಮಿಸಲು ನಿರ್ಧರಿಸಲಾಯಿತು. 39.42 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣದ ಸೇತುವೆ ಇದೀಗ ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಂಡಿದೆ ಎಂದರು.
Click this button or press Ctrl+G to toggle between Kannada and English